ಶಿವಮೊಗ್ಗ : ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಸಮಿತಿ ಶಿವಮೊಗ್ಗ ಇದರ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತು ಸಂಸ್ಥಾಪಕರು ನಾಡಿನ ಅಭಿವೃದ್ಧಿಯ ಕಳಶಪ್ರಾಯರಾದ ರಾಜರ್ಷಿ ನಾಲ್ವಡಿ ಶ್ರೀ ಕೃಷ್ಣರಾಜ ಒಡೆಯರ್ ಇವರ 141 ನೆಯ ಜನ್ಮದಿನಾಚರಣೆಯನ್ನು ದಿನಾಂಕ 04 ಜೂನ್ 2025ರಂದು ಬೆಳಿಗ್ಗೆ 11-00 ಗಂಟೆಗೆ ಶಿವಮೊಗ್ಗದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತು ಶಿವಮೊಗ್ಗ ಜಿಲ್ಲಾ ಸಮಿತಿಯ ಅಧ್ಯಕ್ಷರಾದ ಡಿ. ಮಂಜುನಾಥ ಇವರು ಉದ್ಘಾಟನೆ ಮಾಡಲಿದ್ದು, ಶಿವಮೊಗ್ಗದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಈಶ್ವರಪ್ಪ ಎಚ್. ಇವರು ಅಧ್ಯಕ್ಷತೆ ವಹಿಸಲಿರುವರು. ಹಿರಿಯ ಸಾಹಿತಿ ಜಿ.ವಿ. ಸಂಗಮೇಶ್ವರ ಇವರು ಉಪನ್ಯಾಸ ನೀಡಲಿದ್ದು, ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಯೋಗೀಶ್ ಎಸ್. ಅತಿಥಿಯಾಗಿ ಭಾಗವಹಿಸಲಿದ್ದಾರೆ.