ಬೆಂಗಳೂರು : ಕನ್ನಡ ನಾಡು, ನುಡಿ, ಸಂಸ್ಕೃತಿ ,ಇತಿಹಾಸ, ಮಾನವಿಕ ವಿಷಯಗಳಿಗೆ ಕುರಿತು ನಡೆಸುವ ಸಂಶೋಧನ ಕ್ಷೇತ್ರದ ಅನನ್ಯ ಸಾಧನೆಗೆ ಕನ್ನಡ ಪುಸ್ತಕ ಪ್ರಾಧಿಕಾರ ಕೊಡ ಮಾಡುವ ‘ಡಾ. ಎಂ. ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ’ಯ 2023ನೇ ಸಾಲಿನ ಪ್ರಶಸ್ತಿಗೆ ಹಿರಿಯ ಸಾಹಿತಿ ಹಾಗು ಸಂಶೋಧಕಿ ಡಾ. ಇಂದಿರಾ ಹೆಗ್ಗಡೆ ಆಯ್ಕೆಯಾಗಿದ್ದು, ಪ್ರಶಸ್ತಿಯನ್ನು 4 ಜೂನ್ 2025 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರಿಂದ ಸ್ವೀಕರಿಸಿದರು.
ಹಿರಿಯ ಸಾಹಿತಿ ಪ್ರೊ. ಅರವಿಂದ ಮಾಲಗತ್ತಿ, ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ ಮತ್ತಿತರರು ಉಪಸ್ಥತರಿದ್ದರು.
ಕನ್ನಡ ಮತ್ತು ತುಳು ನಾಡು, ನುಡಿ, ಸಂಸ್ಕೃತಿ, ಇತಿಹಾಸ, ಜನಪದ, ಲೋಕಕ್ಕೆ ತಮ್ಮ ಮೌಲಿಕ ಸಂಶೋಧನಾ ಮತ್ತು ಸೃಜನಶೀಲ ಕೃತಿಗಳನ್ನು ಕೊಡುಗೆಯಾಗಿ ನೀಡಿರುತ್ತಾರೆ. ಎಸ್. ಆರ್. ಹೆಗ್ಡೆ ಚಾರಿಟಬಲ್ ಟ್ರಸ್ಟ್ ಮೂಲಕ ಕನ್ನಡ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು, ಗ್ರಂಥಾಲಯ ಗಳಿಗೆ ಪುಸ್ತಕ ಕೊಡುಗೆ . ಕೃತಿ ಪ್ರಕಟಣೆ ಮತ್ತು ಸಂಘಟನಾ ಕಾರ್ಯಗಳಲ್ಲಿ ತೊಡಗಿಸಿ ಕೊಂಡಿದ್ದಾರೆ.
Subscribe to Updates
Get the latest creative news from FooBar about art, design and business.