ಉಡುಪಿ : ಕಾಪು ಮಂಥನ ರೆಸಾರ್ಟ್ ನಲ್ಲಿ ದಿನಾಂಕ 16 ಜೂನ್ 2025ರಂದು ಪೂರ್ವಾಹ್ನ ಶಾಸಕರಾದ ಶ್ರೀ ಗುರ್ಮೆ ಸುರೇಶ್ ಶೆಟ್ಟಿಯವರ ನೇತೃತ್ವದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಯಕ್ಷಶಿಕ್ಷಣ ಶಾಲೆಗಳ ಮುಖ್ಯಶಿಕ್ಷಕರ ಸಭೆಯು ನಡೆಯಿತು. ಅಪರಾಹ್ನ ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕುಂದಾಪುರ ಮತ್ತು ಬೈಂದೂರು ವಿಧಾನಸಭಾ ಕ್ಷೇತ್ರದ ಯಕ್ಷಶಿಕ್ಷಣ ಶಾಲೆಗಳ ಮುಖ್ಯಶಿಕ್ಷಕರ ಸಭೆ, ಶಾಸಕರಾದ ಶ್ರೀ ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರುರಾಜ್ ಗಂಟಿಹೊಳೆಯವರ ಸಮ್ಮುಖದಲ್ಲಿ ನಡೆಯಿತು.
ಸಭೆಯಲ್ಲಿ ಕುಂದಾಪುರ, ಬೈಂದೂರು, ಬ್ರಹ್ಮಾವರದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು. ಯಕ್ಷಶಿಕ್ಷಣ ಟ್ರಸ್ಟ್ ಕಾರ್ಯದರ್ಶಿ ಮುರಲಿ ಕಡೆಕಾರ್ ಉಭಯ ಸಭೆಗಳಲ್ಲಿ ಈ ಬಾರಿಯ ಯಕ್ಷಶಿಕ್ಷಣದ ಒಟ್ಟು ಸಿದ್ಧತೆಗಳ ಕುರಿತು ಮಾಹಿತಿ ನೀಡಿದರು. ಎರಡೂ ಸಭೆಗಳಲ್ಲಿ ಟ್ರಸ್ಟಿಗಳಾದ ವಿ.ಜಿ. ಶೆಟ್ಟಿ ಮತ್ತು ಗಣೇಶ್ ಬ್ರಹ್ಮಾವರ ಭಾಗವಹಿಸಿದ್ದರು.