ಗೋವಾ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಇದರ ಗೋವಾ ಘಟಕದ ದ್ವಿತೀಯ ವರ್ಷದ ವಾರ್ಷಿಕೋತ್ಸವವನ್ನು 22 ಜೂನ್ 2025ರಂದು ಮಧ್ಯಾಹ್ನ 3-00 ಗಂಟೆಗೆ ಗೋವಾ ಪಣಜಿಯ ಇನ್ಸ್ಟಿಟ್ಯೂಟ್ ಮೆನೆಜಸ್ ಬ್ರಗಾನ್ಸಾ ಸಭಾಗೃಹದಲ್ಲಿ ಹಮ್ಮಿಕೊಳ್ಳಲಾಗಿದೆ.
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಗೋವಾ ಘಟಕದ ಅಧ್ಯಕ್ಷರಾದ ಗಣೇಶ್ ಶೆಟ್ಟಿ ಇರ್ವತ್ತೂರು ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭಾ ಕಾರ್ಯಕ್ರಮವನ್ನು ರಾಜ್ಯ ಸಚಿವರಾದ ಶ್ರೀಪಾದ್ ನಾಯ್ಕ್ ಇವರು ಉದ್ಘಾಟಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಹಳೆಯಂಗಡಿ ಇವರಿಂದ ‘ಶ್ರೀ ದೇವಿ ಮಹಾತ್ಮೆ’ ಎಂಬ ಪ್ರಸಂಗದ ಯಕ್ಷಗಾನ ಬಯಲಾಟ ನಡೆಯಲಿದೆ.