ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ಮತ್ತು ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ‘ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು : ಉಪನ್ಯಾಸಮಾಲೆ’ ಕಾರ್ಯಕ್ರಮವನ್ನು ದಿನಾಂಕ 26 ಜೂನ್ 2025ರಂದು ಮಧ್ಯಾಹ್ನ 2-00 ಗಂಟೆಗೆ ಬೆಳ್ತಂಗಡಿಯ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷರಾದ ಡಿ. ಯದುಪತಿ ಗೌಡ ಇವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಉಜಿರೆಯ ಶ್ರೀ. ಧರ್ಮಸ್ಥಳ ಮಂಜುನಾಥ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಬೋಜಮ್ಮ ಕೆ.ಎನ್. ಇವರು ‘ರಾಷ್ಟ್ರಕವಿ ಕುವೆಂಪು’ ಇವರ ಬಗ್ಗೆ ಉಪನ್ಯಾಸ ನೀಡಲಿದ್ದಾರೆ.