ಶಿವಮೊಗ್ಗ : ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ಮತ್ತು ಚಿಂತಕರ ಚಾವಡಿ ಶಿವಮೊಗ್ಗ ಇವರ ಸಹಯೋಗದಲ್ಲಿ ‘ಚಕೋರ’ ಸಾಹಿತ್ಯ ವಿಚಾರ ವೇದಿಕೆಯ ಉದ್ಘಾಟನಾ ಸಮಾರಂಭವನ್ನು ದಿನಾಂಕ 29 ಜೂನ್ 2025ರಂದು ಸಂಜೆ 5-00 ಗಂಟೆಗೆ ಶಿವಮೊಗ್ಗದ ಪ್ರಜ್ಞಾ ಬುಕ್ ಗ್ಯಾಲರಿಯಲ್ಲಿ ಆಯೋಜಿಸಲಾಗಿದೆ.
ಈ ಸಮಾರಂಭವನ್ನು ಬೆಂಗಳೂರಿನ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಎಲ್.ಎನ್. ಮುಕುಂದರಾಜ್ ಇವರು ಉದ್ಘಾಟನೆ ಮಾಡಲಿದ್ದು, ಸದಸ್ಯ ಸಂಚಾಲಕರಾದ ಡಾ. ಪಿ. ಚಂದ್ರಿಕಾ ಆಶಯ ನುಡಿಗಳನ್ನಾಡಲಿದ್ದಾರೆ. ಪ್ರಾಧ್ಯಾಪಕರು ಬರಹಗಾರರಾದ ಡಾ. ಕುಂಸಿ ಉಮೇಶ್ ಇವರು ‘ಬಾನು ಮುಷ್ತಾಕ್ ಅವರ ಹಸೀನಾ ಮತ್ತು ಇತರ ಕಥೆಗಳು’ ಎಂಬ ವಿಷಯದ ಬಗ್ಗೆ ವಿಷಯ ಮಂಡನೆ ಮಾಡಲಿರುವರು.