ಮಂಗಳೂರು : ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ಬೆಸೆಂಟ್ ಮಹಿಳಾ ಪದವಿ ಪೂರ್ವ ಕಾಲೇಜು ಇವರ ಜಂಟಿ ಆಶ್ರಯದಲ್ಲಿ 106 ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮವು ಬೆಸೆಂಟ್ ಮಹಿಳಾ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ 27 ಜೂನ್ 2025ರಂದು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಸೆಂಟ್ ಮಹಿಳಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ನಾಯಕ್ ರೂಪಸಿಂಗ್ ವಹಿಸಿದ್ದರು. ಮುಖ್ಯ ಸಂಪನ್ಮೂಲ ಅತಿಥಿಯಾಗಿ ಜನಪದ ವಿದ್ವಾಂಸರಾದ ಡಾ. ಗಣೇಶ್ ಅಮೀನ್ ಸಂಕಮಾರ್ ಹಾಗೂ ನಿವೃತ್ತ ಪ್ರಾಧ್ಯಾಪಕಿ ಹಾಗೂ ಲೇಖಕಿಯಾದ ಡಾ. ಮೀನಾಕ್ಷಿ ರಾಮಚಂದ್ರ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಗೌರವ ಅತಿಥಿಗಳಾಗಿ ಮಂಗಳೂರು ಪ್ರೆಸ್ ಕ್ಲಬ್ ಇದರ ಅಧ್ಯಕ್ಷರಾದ ಪಿ. ಬಿ. ಹರೀಶ್ ರೈ ಹಾಗೂ ಜಾನಪದ ಪರಿಷತ್ ಬೆಂಗಳೂರು ಇದರ ಜಿಲ್ಲಾಧ್ಯಕ್ಷರಾದ ಪಮ್ಮಿ ಕೊಡಿಯಾಲ್ ಬೈಲ್ ಭಾಗವಹಿಸಿದ್ದರು. ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಎಲ್ಲರನ್ನೂ ಸ್ವಾಗತಿಸಿದರು. ಶಿಕ್ಷಕಿ ಲೇಖಕಿ ಸುರೇಖಾ ಯಾಳವಾರ ಕಾರ್ಯಕ್ರಮವನ್ನು ನಿರೂಪಿಸಿ, ಉಮೇಶ್ ರಾವ್ ಕುಂಬಳೆ ವಂದಿಸಿದರು.