ಉಡುಪಿ : ಯಕ್ಷಗಾನ ಕಲಾರಂಗ (ರಿ.) ಇದರ ವತಿಯಿಂದ ವೃತ್ತಿ ಮೇಳದ ಯುವ ಕಲಾವಿದರಿಗಾಗಿ ಆಯೋಜಿಸಿರುವ 4 ದಿನಗಳ ಸನಿವಾಸ ‘ಯಕ್ಷಗಾನ ಮಾರ್ಗದರ್ಶಿ ಶಿಬಿರ’ವು ದಿನಾಂಕ 01 ಜುಲೈ 2025ರಂದು ಪೂರ್ವಾಹ್ನ 10-30 ಗಂಟೆಗೆ ಉಡುಪಿಯ ಯಕ್ಷಗಾನ ಕಲಾರಂಗದ ಐ.ವೈ.ಸಿ. ಸಭಾಂಗಣದಲ್ಲಿ ಉದ್ಘಾಟನೆಗೊಳ್ಳಲಿದೆ.
ಶ್ರೀಕ್ಷೇತ್ರ ಕಟೀಲು ಅನುವಂಶಿಕ ಅರ್ಚಕರಾದ ಹರಿನಾರಾಯಣದಾಸ ಆಸ್ರಣ್ಣ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದು, ಯಕ್ಷಗಾನ ಕಲಾರಂಗದ ಅಧ್ಯಕ್ಷರಾದ ಎಂ. ಗಂಗಾಧರ ರಾವ್ ಇವರು ಅಧ್ಯಕ್ಷತೆ ವಹಿಸಲಿರುವರು. ಕಲಾಪೋಷಕರಾದ ಪಣಂಬೂರು ವಾಸುದೇವ ಐತಾಳ್ ಇವರು ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ.