ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕ ಮತ್ತು ನೆಲ್ಲಿಕಾರು ಜಿನದತ್ತ ಶೆಟ್ಟಿ ವಸಂತಮ್ಮ ಪ್ರತಿಷ್ಠಾನ ಇದರ ಸಹಯೋಗದಲ್ಲಿ ‘ಸಾಹಿತ್ಯ ಕೃತಿ ಅವಲೋಕನ’ ಕಾರ್ಯಕ್ರಮವನ್ನು ದಿನಾಂಕ 05 ಜುಲೈ 2025ರಂದು ಸಂಜೆ 4-00 ಗಂಟೆಗೆ ಮಂಗಳೂರಿನ ಶಾರದಾ ವಿದ್ಯಾ ಸಂಸ್ಥೆಯ ಧ್ಯಾನ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮವನ್ನು ಶಾರದ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಡಾ. ಎಂ.ಬಿ. ಪುರಾಣಿಕ್ ಇವರು ಉದ್ಘಾಟನೆ ಮಾಡಲಿದ್ದು, ಕ.ಸಾ.ಪ. ಮಂಗಳೂರು ತಾಲೂಕು ಘಟಕದ ಅಧ್ಯಕ್ಷರಾದ ಡಾ. ಮಂಜುನಾಥ ಎಸ್. ರೇವಣಕರ್ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಗಣೇಶ್ ಪ್ರಸಾದ್ ಜೀಯವರ ‘ಕಾಂತೆ ಕವಿತೆ’ ಕೃತಿಯನ್ನು ಖ್ಯಾತ ಸಾಹಿತಿ ಪ್ರೊ. ಭುವನೇಶ್ವರಿ ಹೆಗಡೆ ಮತ್ತು ಡಾ. ಮೀನಾಕ್ಷಿ ರಾಮಚಂದ್ರರ ‘ಮಾತು ಎಂಬ ವಿಸ್ಮಯ’ ಎಂಬ ಕೃತಿಯನ್ನು ಸ್ವರೂಪ ಅಧ್ಯಯನ ಕೇಂದ್ರದ ಶ್ರೀಮತಿ ಸುಮಂಗಲಾ ಕೃಷ್ಣಾಪುರ ಇವರು ಅವಲೋಕನ ಮಾಡಲಿದ್ದಾರೆ.