ಫರಂಗಿಪೇಟೆ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಇದರ ಯಕ್ಷಧ್ರುವ – ಯಕ್ಷಶಿಕ್ಷಣ ಯಕ್ಷಗಾನ ಶಿಕ್ಷಣ ಅಭಿಯಾನ 2025-26ನೇ ಸಾಲಿನ ಯಕ್ಷಗಾನ ತರಗತಿಯು ದಿನಾಂಕ 30 ಜೂನ್ 2025ರಂದು ಅರ್ಕುಳ ಫರಂಗಿಪೇಟೆಯ ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ಆರಂಭಗೊಂಡಿತು.
ಈ ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ಶ್ರೀರಾಮ ಶಾಲಾಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಯುತ ಎ. ವಜ್ರನಾಭ ಶೆಟ್ಟಿಯವರು ವಹಿಸಿದ್ದು, ಉದ್ಘಾಟನೆಯನ್ನು ಶ್ರೀರಾಮ ವಿದ್ಯಾ ಸಂಸ್ಥೆಯ ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷರಾದ ಶ್ರೀಯುತ ಎ.ಕೆ. ಜಯರಾಮ್ ಶೇಖರು ದೀಪ ಬೆಳಗಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಯಕ್ಷಧ್ರುವ ಪಟ್ಲ ಪೌಂಡೇಶನ್ ಸರಪಾಡಿ ಘಟಕದ ಸಂಚಾಲಕರಾದ ಶ್ರೀಯುತ ಸರಪಾಡಿ ಅಶೋಕ ಶೆಟ್ಟಿ ಭಾಗವಹಿಸಿ, ಶುಭ ಹಾರೈಸಿದರು.
ವೇದಿಕೆಯಲ್ಲಿ ಶ್ರೀರಾಮ ವಿದ್ಯಾ ಸಂಸ್ಥೆಯ ಸಂಚಾಲಕರಾದ ಎ. ಗೋವಿಂದ ಶೆಣೈ, ಶಿವರಾಮ ದೋಟ, ದಿನೇಶ್ ಶೆಟ್ಟಿ ಕೊಟ್ಟಿಂಜ, ಯಕ್ಷ ಗುರು ಶ್ರೀರಕ್ಷಿತ್ ಶೆಟ್ಟಿ ಪಡ್ರೆ ಉಪಸ್ಥಿತರಿದ್ದರು. ಶಾಲಾ ಮುಖ್ಯಸ್ಥರಾದ ಶ್ರೀಯುತ ಕೆ.ಆರ್. ದೇವದಾಸ ಸ್ವಾಗತಿಸಿ, ಶಿಕ್ಷಕರಾದ ರಕ್ಷಿತ್ ಆಚಾರ್ಯ ವಂದಿಸಿ, ಪ್ರೌಢಶಾಲಾ ಮುಖ್ಯೋಪಾದ್ಯಾರಾದ ಜಯಕುಮಾರ್ ಕಾರ್ಯಕ್ರಮ ನಿರೂಪಿಸಿದರು.