ಕಾರ್ಕಳ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಬೆಂಗಳೂರು ಮತ್ತು ಕೆನರಾ ಬ್ಯಾಂಕ್ ಪ್ರಾಯೋಜಿತ ಸಿ.ಇ. ಕಾಮತ್ ಕರಕುಶಲ ತರಬೇತಿ ಸಂಸ್ಥೆಯ ಸಹಯೋಗದೊಂದಿಗೆ ಯುವ ಶಿಲ್ಪಿಗಳಿಗಾಗಿ ‘ಶಿಲ್ಪ ಶಾಸ್ತ್ರ, ರೇಖಾಚಿತ್ರ ಹಾಗೂ ಕಾಷ್ಠ ಶಿಲ್ಪ ಪ್ರಾತ್ಯಕ್ಷಿಕೆ ಕಾರ್ಯಾಗಾರ’ವನ್ನು ದಿನಾಂಕ 04 ಜುಲೈ 2025ರಂದು ಬೆಳಿಗ್ಗೆ 10-00 ಗಂಟೆಗೆ ಕಾರ್ಕಳ ಮಿಯ್ಯಾರು ಇಲ್ಲಿರುವ ಸಿ.ಇ. ಕಾಮತ್ ಕರಕುಶಲ ತರಬೇತಿ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ಶಿಲ್ಪಕಲಾ ಅಕಾಡೆಮಿಯ ಸದಸ್ಯರಾದ ವಿಶ್ವಕರ್ಮ ಆಚಾರ್ಯ ಇವರ ಉಪಸ್ಥಿತಿಯಲ್ಲಿ ಕರ್ನಾಟಕ ಶಿಲ್ಪಕಲಾ ಅಕಾಡೆಮಿಯ ಅಧ್ಯಕ್ಷರಾದ ಎಂ.ಸಿ. ರಮೇಶ್ ಇವರು ಈ ಕಾರ್ಯಾಗಾರವನ್ನು ಉದ್ಘಾಟನೆ ಮಾಡಲಿರುವರು. ಶಿಲ್ಪ ಕಲಾವಿದರಾದ ವಿಪಿನ್ ಭದೌರಿಯಾ ಇವರು ಸಂಪನ್ಮೂಲ ವ್ಯಕ್ತಿಯಾಗಿ ಈ ಕಾರ್ಯಾಗಾರವನ್ನು ನಡೆಸಿಕೊಡಲಿದ್ದಾರೆ.