ಉಡುಪಿ : ಯಕ್ಷಗಾನ ಕಲಾರಂಗ (ರಿ.) ಇದರ ವತಿಯಿಂದ ಆಯೋಜಿಸಿರುವ ನಾಲ್ಕು ದಿನಗಳ ಸನಿವಾಸ ‘ಯಕ್ಷಗಾನ ಮಾರ್ಗದರ್ಶಿ ಶಿಬಿರ’ದ ಸಮಾರೋಪ ಸಮಾರಂಭವನ್ನು ದಿನಾಂಕ 04 ಜುಲೈ 2025ರಂದು ಅಪರಾಹ್ನ 4-00 ಗಂಟೆಗೆ ಉಡುಪಿಯ ಯಕ್ಷಗಾನ ಕಲಾರಂಗದ ಐ.ವೈ.ಸಿ. ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ವಿದ್ವಾಂಸರಾದ ಲಕ್ಷ್ಮೀಶ ತೋಳ್ಪಾಡಿ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಸಮಾರಂಭದಲ್ಲಿ ಕರ್ಣಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿ ಇವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಅವಧಾನಿ ವಿದ್ವಾನ್ ಗುಂಡಿಬೈಲು ಸುಬ್ರಹ್ಮಣ್ಯ ಭಟ್ ಇವರು ಅಭಿನಂದನಾ ಭಾಷಣ ಮಾಡಲಿದ್ದು, ತಲ್ಲೂರು ಕನಕಾ ಅಣ್ಣಯ್ಯ ಶೆಟ್ಟಿ ಸ್ಮರಣಾರ್ಥ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ಯನ್ನು ಶತಾವಧಾನಿ ಡಾ. ಆರ್. ಗಣೇಶ್ ಇವರಿಗೆ ಪ್ರದಾನ ಮಾಡಲಾಗುವುದು.