ಕೋಲಾರ : ಮೇಘ ಮೈತ್ರಿ ಕನ್ನಡ ಸಾಹಿತ್ಯ ಸಂಘ( ರಿ) ಕಮತಗಿ ಹಾಗೂ ಕಾಸರಗೋಡು ಕನ್ನಡ ಭವನ ಜಿಲ್ಲಾ ಘಟಕ ಕೋಲಾರ ವತಿಯಿಂದ ಗಡಿ ನಾಡು ಸಾಹಿತ್ಯ ಸಮ್ಮೇಳನವನ್ನು ದಿನಾಂಕ 19 ಜುಲೈ 2025ರ ಶನಿವಾರ ಕೋಲಾರದ ಪತ್ರಕರ್ತರ ಭವನದಲ್ಲಿ ಬೆಳಗ್ಗೆ 9:30ರಿಂದ ಸಂಜೆ 5:00ಗಂಟೆಯವರೆಗೆ ನಡೆಸಲು ಪೂರ್ವಭಾವಿ ಸಭೆ ನಡೆಸಲಾಯಿತು.ಈ ಸಂದರ್ಭದಲ್ಲಿ ಸಮ್ಮೇಳನ ಸರ್ವಾಧ್ಯಕ್ಷರಾಗಿ ಆಯ್ಕೆ ಆಗಿರುವ ಹಿರಿಯ ಸಾಹಿತಿ ಹಾಗೂ ರಂಗ ನಿರ್ದೇಶಕರಾದ ಡಾ. ಇಂಚರ ನಾರಾಯಣ ಸ್ವಾಮಿ ಅವರನ್ನು ಸನ್ಮಾನಿಸಲಾಯಿತು. ಸಮ್ಮೇಳನದಲ್ಲಿ ಕನ್ನಡ ಧ್ವಜಾರೋಹಣ, ಸರ್ವಾಧ್ಯಕ್ಷರ ಮೆರವಣಿಗೆ, ಪುಸ್ತಕ ಮಳಿಗೆ ಉದ್ಘಾಟನೆ, ಪುಸ್ತಕ ಬಿಡುಗಡೆ, ಕವಿಗೋಷ್ಠಿ, ವಿಚಾರಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಸಲಾಗುವುದು ಎಂದು ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘ(ರಿ) ಇದರ ಅಧ್ಯಕ್ಷರಾದ ಶ್ರೀ ಎಮ್. ರಮೇಶ ಕಮತಗಿರವರು ಸಭೆಯಲ್ಲಿ ಹಿರಿಯರ ಸಮ್ಮುಖದಲ್ಲಿ ತಿಳಿಸಿದರು. ಈ ಸಂದರ್ಭದಲ್ಲಿ ಕಾಸರಗೋಡು ಕನ್ನಡ ಭವನ ಜಿಲ್ಲಾ ಅಧ್ಯಕ್ಷರಾದ ಶ್ರೀ ಬಿ. ವಿ. ನಂಜುಂಡಪ್ಪ, ಸ್ವರ್ಣ ಭೂಮಿ ಫೌಂಡೇಶನ್ ಇದರ ಸಂಸ್ಥಾಪಕರು ಹಾಗೂ ಅಧ್ಯಕ್ಷರಾದ ಶ್ರೀ ಬಿ. ಶಿವುಕುಮಾರ್, ಕವಿಗಳಾದ ಶ್ರೀ ನಾರಾಯಣಪ್ಪ, ಶ್ರೀ ಸುಬ್ಬರಾಮಯ್ಯ ಟಿ. ಸರ್, ಶ್ರೀ ಮಶಾಕ ಅಬ್ದುಲ್ ತಾಳಿಕೋಟಿ, ಶ್ರೀ ಶ್ರೀನಾಥ್ ಆಜಾದ್ ಇನ್ನಿತರರು ಉಪಸ್ಥಿತರಿದ್ದರು.