ಕಾಸರಗೋಡು : ಕೇರಳ-ಕರ್ನಾಟಕ ಕನ್ನಡ ನುಡಿ ಸಂಭ್ರಮ, ಚುಟುಕು ಕವಿ ಕಾವ್ಯ ಸಂಗಮ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಸರ್ವಾಧ್ಯಕ್ಷರಾಗಿ ಸಾಹಿತಿ, ಕವಯತ್ರಿ, ಸಂಘಟಕಿ, ತೊದಲ್ನುಡಿ ಮಾಸ ಪತ್ರಿಕೆಯ ಪ್ರಧಾನ ಸಂಪಾದಕರು, ದ್ರಾವಿಡ ಭಾಷಾ ಅನುವಾದಕ ಸಂಘ, ಬೆಂಗಳೂರು ಇದರ ಅಧ್ಯಕ್ಷರಾದ ಡಾ. ಸುಷ್ಮಾ ಶಂಕರ್ ಆಯ್ಕೆಯಾಗಿದ್ದಾರೆ.
ಬೆಂಗಳೂರಿನ ಇಮ್ಮಡಿ ಹಳ್ಳಿರಸ್ತೆ, ವೈಟ್ ಫೀಲ್ಡ್ ಶ್ರೀ ಸರಸ್ವತಿ ಎಜುಕೇಶನ್ ಟ್ರಸ್ಟ್(ರಿ.), ಡಾ. ಸುಷ್ಮಾ ಶಂಕರ್ ಪ್ರಧಾನ ಸಂಪಾದಕರಾಗಿರುವ ತೊದಲ್ನುಡಿ ಮಾಸ ಪತ್ರಿಕೆ ಮತ್ತು ಗಡಿನಾಡು ಕಾಸರಗೋಡಿನ ಡಾ. ವಾಮನ್ ರಾವ್ ಬೇಕಲ್-ಸಂಧ್ಯಾರಾಣಿ ಟೀಚರ್ ಸಾರಥ್ಯದ ಕನ್ನಡ ಭವನ ಮತ್ತು ಗ್ರಂಥಾಲಯ(ರಿ.), ಕೇರಳ ರಾಜ್ಯ-ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ ಕಾಸರಗೋಡು, ಕಾಸರಗೋಡು ಕನ್ನಡ ಭವನ ಪ್ರಕಾಶನ, ಸಂಯುಕ್ತ ಆಶ್ರಯದಲ್ಲಿ ಶ್ರೀ ಸರಸ್ವತಿ ಎಜುಕೇಶನ್ ಟ್ರಸ್ಟ್(ರಿ.) ಅಡಿಟೋರಿಯಮ್‌ನಲ್ಲಿ ದಿನಾಂಕ 20 ಜುಲೈ 2025ರ ಭಾನುವಾರ ಬೆಳಿಗ್ಗೆ ಘಂಟೆ 10.00 ರಿಂದ ಕಾರ್ಯಕ್ರಮ ಜರುಗಲಿರುವುದು.
“ಕೇರಳ-ಕರ್ನಾಟಕ ಕನ್ನಡ ನುಡಿ ಸಂಭ್ರಮ” “ಚುಟುಕು ಕವಿ ಕಾವ್ಯ ಸಂಗಮ” ಕಾರ್ಯಕ್ರಮದಲ್ಲಿ ಬೆಂಗಳೂರಿನ ಪ್ರಖ್ಯಾತ ಲೇಖಕರು, ಕವಿಗಳು, ಪತ್ರಕರ್ತರುಗಳು ಭಾಗವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಕನ್ನಡ ಭವನದ ಗೌರವಾನ್ವಿತ ಪ್ರಶಸ್ತಿಗಳಾದ “ರಾಷ್ಟ್ರಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿ”, “ನಾಡೋಜ ಡಾ. ಕಯ್ಯಾರ ರಾಷ್ಟ್ರೀಯ ಪ್ರಶಸ್ತಿ’ ಕನ್ನಡ ಭವನದ ಅಂತಾರಾಜ್ಯ ಪ್ರಶಸ್ತಿಯಾದ ‘ಕನ್ನಡ ಪಯಸ್ವಿನಿ ಪ್ರಶಸ್ತಿ” ಪ್ರದಾನ ನಡೆಯಲಿದೆ ಎಂದು ಕಾರ್ಯಕ್ರಮದ ಸಂಯೋಜಕರಾದ ಕನ್ನಡ ಭವನದ ಡಾ. ವಾಮನ್ ರಾವ್ ಬೇಕಲ್ ಹಾಗೂ ಶ್ರೀ ಸರಸ್ವತಿ ಎಜುಕೇಶನ್ ಟ್ರಸ್ಟಿ ಇದರ ಡಾ. ರಾಕೇಶ್ ತಿಳಿಸಿದ್ದಾರೆ.