ಮಡಿಕೇರಿ : ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾ ಘಟಕ ಮತ್ತು ಕನ್ನಡ ಭವನದ ಕೊಡಗು ಜಿಲ್ಲಾ ಘಟಕದ ಸಂಯುಕ್ತಾಶ್ರಯದಲ್ಲಿ ಕೊಡಗು ಜಿಲ್ಲಾ ಚುಟುಕು ಕಾವ್ಯಶ್ರೀ ಪ್ರಶಸ್ತಿ, ಕನ್ನಡ ಭವನ ಕಾಸರಗೋಡಿನ ಪ್ರತಿಷ್ಠಿತ ಅಂತರ ರಾಜ್ಯ ಪ್ರಶಸ್ತಿಯಾದ ಕನ್ನಡ ವಯಸ್ಸಿನಿ ಪ್ರಶಸ್ತಿ ಪ್ರದಾನ, ಪುಸ್ತಕ ಬಿಡುಗಡೆ ಮತ್ತು ಕೊಡಗು ಮಳೆಗಾಲ ಕವಿಗೋಷ್ಠಿ ಕಾರ್ಯಕ್ರಮ ದಿನಾಂಕ 06 ಜುಲೈ 2025ರಂದು ಮಡಿಕೇರಿಯ ಪತ್ರಿಕಾ ಭವನದಲ್ಲಿ ನಡೆಯಿತು.
ಕೊಡಗು ಕನ್ನಡ ಭವನದ ಅಧ್ಯಕ್ಷರಾದ ಬೊಳ್ಳಜಿರ ಬಿ. ಅಯ್ಯಪ್ಪ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿ ಸ್ಥಾಪಕ ಸಂಚಾಲಕರಾದ ಡಾ.ವಾಮನ್ ರಾವ್ ಬೇಕಲ್ ಹಾಗೂ ಸಂಧ್ಯಾರಾಣಿ ಟೀಚರ್ ಉದ್ಘಾಟಿಸಿದರು. ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ತಿಗ್ಗಾಲು ಎನ್.ಗಿರೀಶ ಮೂರ್ನಾಡು, ಮೂಕಳೇರ ಜೈನಿ ಪೂಣಚ್ಚ ಪೊನ್ನಂಪೇಟೆ, ವಂದ್ಯಂಡ ರೇಣುಕ ಸೋಮಯ್ಯ ಹೊನೂರು ಅಮ್ಮತ್ತಿ, ಅವರ್ಣಾ ಹುಲಿತಾಳ, ಅಯ್ಯನೆರವಂಡ ಪ್ರಿತುನ್ ಪೂವಣ್ಣ ಅವರಿಗೆ ಕೊಡಗು ಜಿಲ್ಲಾ ಚುಟುಕು ‘ಕಾವ್ಯಶ್ರೀ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ಕನ್ನಡಭವನ ಕಾಸರಗೋಡಿನ ಪ್ರತಿಷ್ಠಿತ ಅಂತಾರಾಜ್ಯ ಪ್ರಶಸ್ತಿಯಾದ ‘ಕನ್ನಡ ವಯಸ್ಸಿನಿ ಪ್ರಶಸ್ತಿ’ಯನ್ನು ಕವಯತ್ರಿ, ಲೇಖಕಿ ಸ್ಮಿತಾ ಅಮೃತರಾಜ್, ಆಕಾಶವಾಣಿ ನಿವೃತ್ತ ಉದ್ಘೋಷಕ ಸುಬ್ರಾಯ ಸಂಪಾಜೆ, ಸ್ವೀಚ್ ಹಾಗೂ ಇಂಪ್ಲಾಂಟ್ ಕ್ಲಿನಿಕ್ ಇಂಡಿಯಾ ಹಾಗೂ ಮರ್ಕರಾ ಪೋಸ್ಟ್ ಎಂ.ಡಿ, ಪಿ. ಆರ್. ಮ್ಯಾನೇಜರ್ ಜೈರನ್ ಥಾಮನ್ ಅಲೆಗ್ರಾಂಡರ್ ಅವರಿಗೆ ನೀಡಿ ಗೌರವಿಸಲಾಯಿತು. ಕೊಡವ ಮಕ್ಕಡ ಕೂಟದ 116ನೇ ಪುಸ್ತಕ ಲೇಖಕಿ ಬಿ.ವೈಶಾಲಿನಿ ಅವರು ರಚಿಸಿರುವ ‘ಮುಖವಾಡ’ ಕವನ ಸಂಕಲನ ಕೃತಿಯನ್ನು ಕನ್ನಡ ಭವನದ ಅಧ್ಯಕ್ಷ ಬೊಳ್ಳಜಿರ ಬಿ. ಅಯ್ಯಪ್ಪ ಅವರು ಲೋಕಾರ್ಪಣೆಗೊಳಿಸಿದರು .
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬೊಳ್ಳಜಿರ ಬಿ.ಅಯ್ಯಪ್ಪ ಮಾತನಾಡಿ “ಭಾಷೆ ಮತ್ತು ಸಾಹಿತ್ಯವನ್ನು ಉಳಿಸಿ ಬೆಳೆಸಲು ಕೇಂದ್ರ ಸಮಿತಿ ಸ್ಥಾಪಕ ನಂಚಾಲಕರಾದ ಡಾ. ವಾಮನ್ ರಾವ್ ಬೇಕಲ್ ಅವರು ನೀಡುತ್ತಿರುವ ಕೊಡುಗೆ ಅಪಾರ. ಇವರ ಪ್ರಯತ್ನಗಳಿಗೆ ಎಲ್ಲರೂ ಬೆಂಬಲವಾಗಿ ನಿಲ್ಲಬೇಕು. ಧಾರಾಕಾರ ಮಳೆಯ ನಡುವೆಯೂ ದೊಡ್ಡ ಸಂಖ್ಯೆಯ ಸಾಹಿತ್ಯಾಭಿಮಾನಿಗಳು ವಿವಿಧ ಊರುಗಳಿಂದ ಬಂದು ಸೇರಿರುವುದು ಶ್ಲಾಘನೀಯ. ಕಾರ್ಯಕ್ರಮ ಯಶಸ್ವಿಯಾಗಲು ಸಹಕರಿಸದ ಪ್ರತಿಯೊಬ್ಬರಿಗೂ ಧನ್ಯವಾದ” ಎಂದರು .
ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕೊಡಗು ಜಿಲ್ಲಾ ಘಟಕದ ಅಧ್ಯಕ್ಷರಾದ ಎಂ. ಎ. ರುಬೀನಾ ಮಾತನಾಡಿ “ಜಿಲ್ಲೆಯಲ್ಲಿ ಸಂಘಟನೆ ಸ್ಥಾಪನೆಯಾಗಿ ಕೇವಲ 5 ತಿಂಗಳಾಗಿದ್ದು, ಈಗಾಗಲೇ ವಿವಿಧ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿದ್ದೇವೆ. ಕವಿಗೋಷ್ಠಿ ನಡೆಸಲಾಗಿದೆ, ಪ್ರಶಸ್ತಿ ನೀಡಲಾಗಿದೆ, ಸಾಧಕರನ್ನು ಸನ್ಮಾನಿಸಲಾಗಿದೆ. ಇನ್ನು ಮುಂದೆಯೂ ತಾಲ್ಲೂಕು ಮತ್ತು ಗ್ರಾಮೀಣ ಮಟ್ಟದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಸರ್ಕಾರಿ ಶಾಲೆಗಳಿಗೆ ಆದ್ಯತೆ ನೀಡಿ ಯುವ ಸಮೂಹದಲ್ಲಿ ಕನ್ನಡ ಭಾಷಾಭಿಮಾನವನ್ನು ಮೂಡಿಸಲಾಗುವುದು” ಎಂದರು. ಕೊಡಗು ಕನ್ನಡ ಭವನ ಕೋಶಾಧಿಕಾರಿ ವಿನೋದ್ ಕುಡೇಕರ್, ಕಾರ್ಯದರ್ಶಿ ವಸಂತ್ ಕೆರೆಮನೆ, ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕಾಸರಗೋಡು ಜಿಲ್ಲಾ ಘಟಕದ ಅಧ್ಯಕ್ಷ ವಿರಾಜ್ ಅಡೂರು ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.
ರಂಜಿತ್ ಜಯರಾಂ, ನಿವ್ಯ ದೇವಯ್ಯ ಪ್ರಾರ್ಥಿಸಿ, ಅರುಣ್ ಕುಮಾರ್ ಸ್ವಾಗತಿಸಿ, ಹರ್ಷಿತಾ ಶೆಟ್ಟಿ, ವಿನೋದ್ ಮೂಡಗದ್ದೆ ನಿರೂಪಿಸಿ, ಚಂದನ್ ನಂದರಬೆಟ್ಟು ವಂದಿಸಿದರು. ಸೋಮವಾರಪೇಟೆಯ ತೆರೇಸಾ ಲೋಬೊ ಹಾಡಿದರು ಹಾಗೂ ಎಸ್. ಎ. ರಿಶಾ ನೃತ್ಯ ಪ್ರದರ್ಶನ ಮಾಡಿದರು.
Subscribe to Updates
Get the latest creative news from FooBar about art, design and business.
Next Article ಉಳಿಯ ಮನೆಯ ಸುಧಾ ಮಂದಿರದಲ್ಲಿ ಯಕ್ಷಗಾನ ತಾಳಮದ್ದಳೆ