ಉಡುಪಿ : ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ ಉಡುಪಿ ಮತ್ತು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಇವರ ಜಂಟಿ ಆಶ್ರಯದಲ್ಲಿ ‘ಪೊಳಲಿ ಶೀನಪ್ಪ ಹೆಗ್ಗಡೆ ಮತ್ತು ಎಸ್.ಆರ್. ಹೆಗ್ದೆ ಪ್ರಶಸ್ತಿ’ ಪ್ರದಾನ ಸಮಾರಂಭವನ್ನು ದಿನಾಂಕ 12 ಜುಲೈ 2025ರಂದು ಬೆಳಿಗ್ಗೆ 10-30 ಗಂಟೆಗೆ ಉಡುಪಿಯ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಸಮಾರಂಭದ ಅಧ್ಯಕ್ಷತೆಯನ್ನು ಎಂ.ಜಿ.ಎಂ. ಪದವಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವನಿತಾ ಮಯ್ಯ ಇವರು ವಹಿಸಲಿದ್ದು, ಟಿ. ಮೋಹನದಾಸ ಪೈ ಕೌಶಲ್ಯ ಅಭಿವೃದ್ಧಿ ಕೇಂದ್ರದ ನಿರ್ದೇಶಕರಾದ ಟಿ. ರಂಗ ಪೈ ಇವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಇತಿಹಾಸ ತಜ್ಞರಾದ ಡಾ. ಮಾಲತಿ ಕೃಷ್ಣಮೂರ್ತಿ ಇವರಿಗೆ ‘ಪೊಳಲಿ ಶೀನಪ್ಪ ಹೆಗ್ಗಡೆ ಮತ್ತು ಎಸ್.ಆರ್. ಹೆಗ್ದೆ ಪ್ರಶಸ್ತಿ’ ಪ್ರದಾನ ಮಾಡಲಾಗುವುದು. ಪುರಾತತ್ವ ತಜ್ಞರಾದ ಡಾ. ಪುಂಡಿಕಾಯಿ ಗಣಪಯ್ಯ ಭಟ್ ಇವರು ‘ಮೌಖಿಕ ಪರಂಪರೆ ಮತ್ತು ತುಳುವ ಇತಿಹಾಸ’ ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ನೀಡಲಿದ್ದಾರೆ.