ಮಡಿಕೇರಿ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಸರ್ಕಾರದ ಯೋಜನೆ ಹಾಗೂ ಸಾಧನೆ ಕುರಿತು ಬೀದಿ ನಾಟಕ ಹಾಗೂ ಜಾನಪದ ಸಂಗೀತ ಕಾರ್ಯಕ್ರಮ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ ಬೀದಿನಾಟಕ, ಜಾನಪದ ಸಂಗೀತ ಕಲಾ ತಂಡ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 19 ಜುಲೈ 2025 ಕೊನೆಯ ದಿನಾಂಕವಾಗಿದೆ. ಜಿಲ್ಲೆಯಿಂದ 3 ಬೀದಿನಾಟಕ ಹಾಗೂ 3 ಜಾನಪದ ಸಂಗೀತ ಕಲಾ ತಂಡ ಆಯ್ಕೆ ಮಾಡಲಾಗುವುದು. ಪ್ರತಿ ಬೀದಿನಾಟಕ ತಂಡದಲ್ಲಿ 8 ಜನ ಕಲಾವಿದರಿದ್ದು, ಅದರಲ್ಲಿ ಕಡ್ಡಾಯವಾಗಿ ಇಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಸೇರಿದ ಕಲಾವಿದರು ಇರಬೇಕು. ಪ್ರತಿ ಜಾನಪದ ಸಂಗೀತ ಕಲಾ ತಂಡದಲ್ಲಿ 3 ಜನ ಕಲಾವಿದರಿದ್ದು, ಅದರಲ್ಲಿ ಕಡ್ಡಾಯವಾಗಿ ಒಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಸೇರಿದ ಕಲಾವಿದರಿರಬೇಕು. ಈ ಹಿಂದೆ ಸರ್ಕಾರದ ವಿವಿಧ ಇಲಾಖೆಗಳ ಬೀದಿ ನಾಟಕ ಹಾಗೂ ಜಾನಪದ ಸಂಗೀತ ಜಾಗೃತಿ ಕಾರ್ಯಕ್ರಮ ನಡೆಸಿರುವ ಅನುಭವ ಹೊಂದಿರಬೇಕು. ಬೀದಿ ನಾಟಕ ತಂಡವು ನೋಂದಾಯಿತ ತಂಡವಾಗಿರಬೇಕು. ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಕ ಸಂಪರ್ಕ ಇಲಾಖೆ, ವಾರ್ತಾ ಭವನ, ಸ್ಟೀವರ್ಟ್ ಹಿಲ್ ರಸ್ತೆ, ಮಡಿಕೇರಿ ಇವರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ದಿನಾಂಕ 19 ಜುಲೈ 2025ರೊಳಗೆ ಸಲ್ಲಿಸಬೇಕು. ದಿನಾಂಕ 12 ಆಗಸ್ಟ್ 2025ರಂದು ಬೆಳಗ್ಗೆ 11-00 ಗಂಟೆಗೆ ಇಲಾಖೆ ಕಚೇರಿಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ.