ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ಮತ್ತು ಹೋಬಳಿ ಘಟಕ ಇದರ ವತಿಯಿಂದ ಅರಿವು ಕೇಂದ್ರ ಗ್ರಾಮ ಪಂಚಾಯತ್ ಗ್ರಂಥಾಲಯ ಹಾಗೂ ಗ್ರಂಥಾಲಯ ಸಲಹಾ ಸಮಿತಿ ಗ್ರಾಮ ಪಂಚಾಯತ್ ಕೊಯ್ಯೂರು ಮತ್ತು ಸರಕಾರಿ ಪ್ರೌಢ ಶಾಲೆ ಕೊಯ್ಯೂರು ಇವರ ಸಹಭಾಗಿತ್ವದಲ್ಲಿ ‘ಸಾಹಿತ್ಯ ಸಂಘ ಉದ್ಘಾಟನೆ ಮತ್ತು ಓದುವ ಸಂಸ್ಕೃತಿ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ 10 ಜುಲೈ 2025ರಂದು ಮಧ್ಯಾಹ್ನ 2-00 ಗಂಟೆಗೆ ಕೊಯ್ಯೂರು ಸರಕಾರಿ ಪ್ರೌಢ ಶಾಲೆಯಲ್ಲಿ ಆಯೋಜಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ ಇವರು ಸಾಹಿತ್ಯ ಸಂಘ ಉದ್ಘಾಟನೆ ಮಾಡಲಿದ್ದು, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ದಯಾಮಣಿ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷರಾದ ಡಿ. ಯದುಪತಿ ಗೌಡ ಇವರು ಉಪನ್ಯಾಸ ನೀಡಲಿದ್ದು, ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ಪ್ರಕಾಶ್ ಎಸ್. ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.