ಮಂಗಳೂರು : ಯಕ್ಷ ಕುಸುಮ ಚಾರಿಟೇಬಲ್ ಟ್ರಸ್ಟ್ (ರಿ.) ಬಳ್ಕೂರು ಇದರ ಆಶ್ರಯದಲ್ಲಿ ಅಂಚೆ ಅಧೀಕ್ಷಕರಾದ ಶ್ರೀನಾಥ್ ಬಸ್ರೂರು ಇವರ ಅಂಕಣ ಬರಹಗಳ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ದಿನಾಂಕ 10 ಜುಲೈ 2025ರಂದು ಬೆಳಿಗ್ಗೆ 10-45 ಗಂಟೆಗೆ ಮಂಗಳೂರಿನ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ ನಾಯಕ್ ಇಂದಾಜೆ ಇವರು ಅಧ್ಯಕ್ಷತೆ ವಹಿಸಲಿದ್ದು, ಪುಟ್ಟಣ್ಣ ಕುಲಾಲ್ ಪ್ರತಿಷ್ಠಾನ (ರಿ.) ಇದರ ಅಧ್ಯಕ್ಷರಾದ ಡಾ. ಎಂ. ಅಣ್ಣಯ್ಯ ಕುಲಾಲ್ ಉಳ್ತೂರು ಇವರು ಪುಸ್ತಕ ಬಿಡುಗಡೆ ಮಾಡಲಿದ್ದಾರೆ.