ಬೆಂಗಳೂರು : 2025ನೇ ಸಾಲಿನ ‘ಚಿದಾನಂದ ಪ್ರಶಸ್ತಿ’ಯ ಗೌರವಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ, ಹಿರಿಯ ಸಂಶೋಧಕ ಡಾ.ಬಿ. ಎ. ವಿವೇಕ್ ರೈ ಆಯ್ಕೆಯಾಗಿದ್ದಾರೆ.
ಬೆಂಗಳೂರಿನ ಚಿದಾನಂದ ಪ್ರಶಸ್ತಿ ಪ್ರದಾನ ಸಮಿತಿಯು ವಿದ್ವಾಂಸ ಡಾ. ಎಂ. ಚಿದಾನಂದ ಮೂರ್ತಿ ಅವರ ಹೆಸರಿನಲ್ಲಿ 32 ವರ್ಷಗಳಿಂದ ಪ್ರತಿವರ್ಷ ಸಂಶೋಧಕರಿಗೆ ಪ್ರಶಸ್ತಿ ನೀಡುತ್ತಾ ಬಂದಿದೆ. ಪ್ರಶಸ್ತಿಯು 10 ಸಾವಿರ ರೂ. ನಗದು ಮತ್ತು ಪ್ರಶಸ್ತಿ ಫಲಕ ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ಮಂಗಳೂರಿನಲ್ಲಿ ನಡೆಯಲಿದೆ.