ಮಂಗಳೂರು : ಅಮೃತ ಪ್ರಕಾಶ ಪತ್ರಿಕೆ ಹಾಗೂ ಸರಕಾರಿ ಹಿರಿಯ ಪ್ರೌಢ ಶಾಲೆ ಅತ್ತಾವರ ಮಂಗಳೂರು ಆಯೋಜಿಸುವ 109ನೇ ಸಾಹಿತ್ಯ ಅಭಿರುಚಿ ಕಾರ್ಯಕ್ರಮ 18 ಜುಲೈ 2025ರಂದು ಅತ್ತಾವರ ಶಾಲೆ ಸಭಾಂಗಣದಲ್ಲಿ ಮಧ್ಯಾಹ್ನ ಘಂಟೆ 2:00 ರಿಂದ 3:00ರ ವರೆಗೆ ನಡೆಯಲಿದೆ.
ಅತ್ತಾವರ ಸರಕಾರಿ ಹಿರಿಯ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಬಿ. ರಾಘವೇಂದ್ರ ರಾವ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಹಿರಿಯ ಬರಹಗಾರರಾದ ಎನ್ ಸುಬ್ರಾಯ ಭಟ್, ಶಿಕ್ಷಕಿ ಹಾಗೂ ಕವಯತ್ರಿಯಾದ ಶ್ರೀಮತಿ ನಿರ್ಮಲ ಉದಯಕುಮಾರ್ ಇವರು ಮುಖ್ಯ ಸಂಪನ್ಮೂಲ ಅತಿಥಿಗಳಾಗಿ ಹಾಗೂ ರೋಟರಿ ಕ್ಲಬ್ ಮಂಗಳೂರು ಇದರ ಅಧ್ಯಕ್ಷರಾದ ಭಾಸ್ಕರ್ ರೈ ಕಟ್ಟ ಹಾಗೂ ಹಿರಿಯ ಯೋಗ ಶಿಕ್ಷಕಿಯಾದ ದೇವಿಕಾ ಪುರುಷೋತ್ತಮ ಇವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಅಮೃತ ಪ್ರಕಾಶ ಪತ್ರಿಕೆಯ ಸಂಪಾದಕರಾದ ಡಾ. ಮಾಲತಿ ಶೆಟ್ಟಿ ಮಾಣೂರು ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿದ್ದಾರೆ.

