ಕೋಲಾರ : ಮೇಘ ಮೈತ್ರಿ ಕನ್ನಡ ಸಾಹಿತ್ಯ ಸಂಘ (ರಿ.) ಕಮತಗಿ ಹಾಗೂ ಕಾಸರಗೋಡು ಕನ್ನಡ ಭವನ ಮತ್ತು ಗ್ರಂಥಾಲಯದ ಜಿಲ್ಲಾ ಘಟಕ ಕೋಲಾರ ವತಿಯಿಂದ ‘ಗಡಿನಾಡು ಕನ್ನಡ ಸಾಹಿತ್ಯ ಸಮ್ಮೇಳನ-2025’ವನ್ನು ದಿನಾಂಕ 19 ಜುಲೈ 2025ರ ಶನಿವಾರ ಬೆಳಗ್ಗೆ 9-30 ಗಂಟೆಗೆ ಕೋಲಾರದ ಪತ್ರಕರ್ತರ ಭವನದಲ್ಲಿ ಆಯೋಜಿಸಲಾಗಿದೆ.
ಈ ಸಮ್ಮೇಳನ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಹಾಗೂ ರಂಗ ನಿರ್ದೇಶಕರಾದ ಡಾ.ಇಂಚರ ನಾರಾಯಣ ಸ್ವಾಮಿ ಆಯ್ಕೆ ಆಗಿದ್ದು, ಸಮ್ಮೇಳನದಲ್ಲಿ ಕನ್ನಡ ಧ್ವಜಾರೋಹಣ, ಮೆರವಣಿಗೆ, ಪುಸ್ತಕ ಮಳಿಗೆ ಉದ್ಘಾಟನೆ, ಪುಸ್ತಕ ಬಿಡುಗಡೆ, ಕವಿಗೋಷ್ಠಿ, ವಿಚಾರಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.