ಕಾಸರಗೋಡು: ಕೋಟೆಕಣಿ ಶ್ರೀ ರಾಮನಾಥ ಸಾಂಸ್ಕೃತಿಕ ಭವನ ಸಮಿತಿ ವತಿಯಿಂದ ಕರ್ನಾಟಕ ಯಕ್ಷಗಾನ ಅಕಾಡಮಿ ಸಹಯೋಗದೊಂದಿಗೆ ಆಯೋಜಿಸಿದ ಯಕ್ಷಗಾನ ತರಬೇತಿಯ ಸಮಾರೋಪ ಸಮಾರಂಭವು ದಿನಾಂಕ 12 ಜುಲೈ 2025ರಂದು ಕೋಟೆಕಣಿ ಶ್ರೀ ರಾಮನಾಥ ಸಾಂಸ್ಕೃತಿಕ ಭವನ ಸಭಾಂಗಣದಲ್ಲಿ ನಡೆಯಿತು.
ಶ್ರೀ ವೆಂಕಟ್ರಮಣ ಸ್ವಾಮಿ ಕೃಪಾಶ್ರಿತ ಯಕ್ಷಗಾನ ಕಲಾಸಂಘದ ವ್ಯವಸ್ಥಾಪಕರಾದ ಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯರಾದ ಯಕ್ಷಗಾನ ಕಲಾವಿದ ಸತೀಶ ಅಡಪ ಸಂಕಬೈಲು ಮುಖ್ಯ ಅತಿಥಿಯಾಗಿ ಬಾಗವಹಿಸಿದ್ದರು. ಯಕ್ಷಗುರು ಜಯರಾಮ ಪಾಟಾಳಿ ಪಡುಮಲೆ ಹಾಗೂ ಯಕ್ಷಗಾನ ಕಲಾವಿದ ವೇಣುಗೋಪಾಲ ಶೇಣಿ ಅಭ್ಯಾಗತರಾಗಿದ್ದರು. ಅಭ್ಯರ್ಥಿಗಳಿಗೆ ಸತೀಶ ಅಡಪ ಸಂಕಬೈಲು ಪ್ರಮಾಣಪತ್ರ ವಿತರಿಸಿದರು.
ಗುರುಪ್ರಸಾದ್ ಕೋಟೆಕಣಿ ಪ್ರಾಸ್ತಾವಿಕ ಮಾತುಗಳನ್ನಾಡಿ, ಕೆ. ಜಗದೀಶ್ ಕೂಡ್ಲು ನಿರೂಪಿಸಿ, ಪ್ರಮಿಳಾ ವಂದಿಸಿದರು. ಸಭಾಕಾರ್ಯಕ್ರಮದ ಬಳಿಕ ಗಜೇಂದ್ರ ಮೋಕ್ಷ ಯಕ್ಷಗಾನ ಬಯಲಾಟ ನಡೆಯಿತು.