ಮಂಗಳೂರು : ಅಮೃತ ಪ್ರಕಾಶ ಪತ್ರಿಕೆ ಹಾಗೂ ಅತ್ತಾವರ ಸರಕಾರಿ ಹಿರಿಯ ಪ್ರೌಢಶಾಲೆಯ ಜಂಟಿ ಆಶ್ರಯದಲ್ಲಿ 109ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮವು ಪ್ರಭಾರ ಮುಖ್ಯೋಪಾಧ್ಯಾಯರಾದ ಶ್ರೀಮತಿ ಸುಚೇತರವರ ಅಧ್ಯಕ್ಷತೆಯಲ್ಲಿ ದಿನಾಂಕ 18 ಜುಲೈ 2025ರಂದು ಅತ್ತಾವರ ಪ್ರೌಢಶಾಲೆಯ ಸಭಾಂಗಣದಲ್ಲಿ ನಡೆಯಿತು.
ಹಿರಿಯ ಬರಹಗಾರರು ಎನ್. ಸುಬ್ರಾಯ ಭಟ್ ಹಾಗೂ ಶಿಕ್ಷಕಿ ಲೇಖಕಿ ನಿರ್ಮಲ ಉದಯಕುಮಾರ್ ಮುಖ್ಯ ಸಂಪನ್ಮೂಲ ಅತಿಥಿಯಾಗಿ ಮಾತಾಡಿದರು. ಗೌರವ ಅತಿಥಿಗಳಾಗಿ ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಅಧ್ಯಕ್ಷರಾದ ಭಾಸ್ಕರ್ ರೈ ಕಟ್ಟ, ಹಿರಿಯ ಯೋಗ ಶಿಕ್ಷಕಿ ದೇವಿಕಾ ಪುರುಷೋತ್ತಮ್, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಪಕೀರರವರು ಹಾಗೂ ಅಮೃತ ಪ್ರಕಾಶ ಪತ್ರಿಕೆ ಸಂಪಾದಕ ಮಂಡಳಿ ಸದಸ್ಯರಾದ ಉಮೇಶ್ ರಾವ್ ಕುಂಬಳೆ, ಅಮೃತ ಪ್ರಕಾಶ ಪತ್ರಿಕೆಯ ಡಾ. ಮಾಲತಿ ಶೆಟ್ಟಿ ಮಾಣೂರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಡಾ. ಅರುಣ ನಾಗರಾಜ್ ಕಾರ್ಯಕ್ರಮ ನಿರೂಪಿಸಿದರು.