ಉಡುಪಿ : ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ಇವರಿಂದ ರಥಬೀದಿ ಗೆಳೆಯರು (ರಿ.) ಉಡುಪಿ ಇವರ ಸಹಯೋಗದಲ್ಲಿ ‘ಅರವಿನ ಬೆಳಕು ಉಪನ್ಯಾಸ ಮಾಲೆ -7’ ಕಾರ್ಯಕ್ರಮವನ್ನು ದಿನಾಂಕ 22 ಜುಲೈ 2025ರಂದು ಸಂಜೆ 4-00 ಗಂಟೆಗೆ ಉಡುಪಿಯ ಹೆನ್ರಿ ಡುನ್ಯಾಂಟ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮವನ್ನು ಡಾ. ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷರಾದ ಡಾ. ಗಣನಾಥ ಶೆಟ್ಟಿ ಎಕ್ಕಾರು ಇವರ ಅಧ್ಯಕ್ಷತೆಯಲ್ಲಿ ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿ ಶ್ರೀಮತಿ ಸ್ವರೂಪ ಟಿ.ಕೆ. ಇವರು ಉದ್ಘಾಟನೆ ಮಾಡಲಿದ್ದಾರೆ. ‘ಡಾ. ಶಿವರಾಮ ಕಾರಂತರ ಬದುಕು ಮತ್ತು ಬರಹಗಳ ಪ್ರಸ್ತುತತೆ’ ಎಂಬ ವಿಷಯದ ಬಗ್ಗೆ ಬೆಂಗಳೂರು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಇವರು ಉಪನ್ಯಾಸ ನೀಡಲಿದ್ದಾರೆ.