ಬ್ರಹ್ಮಾವರ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಹಾಗೂ ರೋಟರಿ ಕ್ಲಬ್ ಬ್ರಹ್ಮಾವರ ಇವರ ಸಂಯುಕ್ತಾಶ್ರಯದಲ್ಲಿ ‘ಮನೆಗೊಂದು ಗ್ರಂಥಾಲಯ ಕಾರ್ಯಕ್ರಮ ಅನುಷ್ಠಾನ’ ಹಾಗೂ ಜಿಲ್ಲಾ ಜಾಗೃತಿ ಸಮಿತಿ ರಚನೆಯ ಪೂರ್ವಭಾವಿ ಸಭೆಯನ್ನು ದಿನಾಂಕ 27 ಜುಲೈ 2025ರಂದು ಪೂರ್ವಾಹ್ನ 10-00 ಗಂಟೆಗೆ ಬ್ರಹ್ಮಾವರ ರೋಟರಿ ಕ್ಲಬ್ ಇಲ್ಲಿ ಆಯೋಜಿಸಲಾಗಿದೆ.
ಈ ಕಾರ್ಯಕ್ರಮವನ್ನು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ ಇವರ ಅಧ್ಯಕ್ಷತೆಯಲ್ಲಿ ಉಡುಪಿ ಜಿಲ್ಲೆ ಕ.ಸಾ.ಪ.ದ ಸ್ಥಾಪಕಧ್ಯಕ್ಷರಾದ ಎ.ಎಸ್.ಎನ್. ಹಬ್ಬಾರ್ ಇವರು ಉದ್ಘಾಟನೆ ಮಾಡಲಿದ್ದಾರೆ. ಸಾಂಸ್ಕೃತಿಕ ಚಿಂತಕರಾದ ನಾಡೋಜ ಕೆ.ಪಿ. ರಾವ್ ಇವರು ಕರಪತ್ರ ಬಿಡುಗಡೆ ಮಾಡಲಿದ್ದು, ಉಡುಪಿ ಜಿಲ್ಲೆ ಕ.ಸಾ.ಪ.ದ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ ಇವರು ನಲ್ನುಡಿಗಳನ್ನಾಡಲಿದ್ದಾರೆ.