ಮಂಗಳೂರು : ಭ್ರಾಮರೀ ಯಕ್ಷಮಿತ್ರರು ಮಂಗಳೂರು ಟ್ರಸ್ಟ್ ಇವರ ಆಶ್ರಯದಲ್ಲಿ ಎಂಟನೇ ವರ್ಷದ ‘ಯಕ್ಷ ವೈಭವ -2025’ ಕಾರ್ಯಕ್ರಮವನ್ನು ದಿನಾಂಕ 02 ಆಗಸ್ಟ್ 2025ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಸಂಜೆ 7-00 ಗಂಟೆಗೆ ಆಯೋಜಿಸಲಾಗಿದ್ದು, ಯಕ್ಷಗಾನ ಮತ್ತು ಪ್ರಶಸ್ತಿ ಪ್ರದಾನ ನಡೆಯಲಿದೆ.
ತೆಂಕುತಿಟ್ಟಿನ ಹಿರಿಯ ಹಿಮ್ಮೇಳ ಕಲಾವಿದ ಪೆರುವಾಯಿ ಶ್ರೀ ನಾರಾಯಣ ಭಟ್ ಇವರಿಗೆ ‘ಭ್ರಾಮರೀ ಯಕ್ಷಮಣಿ ಪ್ರಶಸ್ತಿ’ ಮತ್ತು ಯಕ್ಷಸಂಗಮ ಮೂಡಬಿದಿರೆ ಮತ್ತು ಹಿರಿಯ ನೇಪಥ್ಯ ಕಲಾವಿದ ವಸಂತ ವಾಮದಪದವು ಇವರಿಗೆ ‘ಭ್ರಾಮರೀ ಯಕ್ಷಸೇವಾ ಪುರಸ್ಕಾರ’ ಪ್ರದಾನ ಮಾಡಲಾಗುವುದು. ತೆಂಕುತಿಟ್ಟಿನ ಸುಪ್ರಸಿದ್ಧ ಹಿಮ್ಮೇಳ ಮತ್ತು ತೆಂಕು – ಬಡಗಿನ ಮುಮ್ಮೇಳ ಕಲಾವಿದರ ಕೂಡುವಿಕೆಯಲ್ಲಿ ‘ಶ್ರೀಮತಿ ಪರಿಣಯ’, ‘ಸಾಧ್ವಿ ಸೈರಂದ್ರಿ’ ಹಾಗೂ ‘ವೈಜಯಂತಿ ಪರಿಣಯ’ ಎಂಬ ಪ್ರಸಂಗದ ಯಕ್ಷಗಾನ ಪ್ರದರ್ಶನಗಳು ನಡೆಯಲಿದೆ.