ಬೆಂಗಳೂರು: ಬಿ. ಎಂ. ಶ್ರೀ. ಪ್ರತಿಷ್ಠಾನವು ‘ಶಾ. ಬಾಲುರಾವ್ ಯುವ ಬರಹಗಾರ ಪ್ರಶಸ್ತಿ’ ಮತ್ತು ‘ಶಾ. ಬಾಲುರಾವ್ ಅನುವಾದ ಪ್ರಶಸ್ತಿ’ಗೆ ಕೃತಿಗಳನ್ನು ಆಹ್ವಾನಿಸಿದೆ.
ಯುವ ಬರಹಗಾರ ಪ್ರಶಸ್ತಿಗೆ 35 ವರ್ಷದೊಳಗಿನವರು 2024ರಲ್ಲಿ ಮೊದಲ ಮುದ್ರಣವಾಗಿ ಪ್ರಕಟವಾಗಿರುವ ಸಾಹಿತ್ಯದ ಯಾವುದೇ ಪ್ರಕಾರದ ಕೃತಿಗಳನ್ನು ಸಲ್ಲಿಸಬಹುದು. ಅನುವಾದ ಪ್ರಶಸ್ತಿಗೆ 2024ರಲ್ಲಿ ಮೊದಲ ಮುದ್ರಣವಾಗಿ ಪ್ರಕಟಗೊಂಡ, ಅನ್ಯ ಭಾಷೆಯಿಂದ ಕನ್ನಡಕ್ಕೆ ಅನುವಾದವಾಗಿರುವ ಕೃತಿಗಳನ್ನು ಆಹ್ವಾನಿಸಲಾಗಿದೆ. ಈ ಪ್ರಶಸ್ತಿಗಳು ತಲಾ ರೂಪಾಯಿ 25 ಸಾವಿರ ನಗದು ಬಹುಮಾನವನ್ನು ಒಳಗೊಂಡಿವೆ.
ಲೇಖಕರು ಸ್ವವಿವರದ ಜತೆಗೆ ಪ್ರಕಟಗೊಂಡ ಕೃತಿಯ ಮೂರು ಪ್ರತಿಗಳನ್ನು ಗೌರವ ಕಾರ್ಯದರ್ಶಿ, ಬಿ. ಎಂ. ಶ್ರೀ. ಪ್ರತಿಷ್ಠಾನ, 3ನೇ ಮುಖ್ಯರಸ್ತೆ, ನರಸಿಂಹರಾಜ ಕಾಲೊನಿ, ಬೆಂಗಳೂರು-560019 ಈ ವಿಳಾಸಕ್ಕೆ ದಿನಾಂಕ 30 ಆಗಸ್ಟ್ 2025ರೊಳಗೆ ಕಳುಹಿಸಬೇಕು ಎಂದು ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ಶಾಂತರಾಜು ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Previous Articleನಂದಳಿಕೆ ಬೋರ್ಡ್ ಶಾಲಾ ಸಭಾಂಗಣದಲ್ಲಿ ತಾಳಮದ್ದಳೆ | ಆಗಸ್ಟ್ 02
Next Article ಅಮ್ಮತ್ತಿಯಲ್ಲಿ ಕಥೆ ಹೇಳುವ ಸ್ಪರ್ಧೆ | ಆಗಸ್ಟ್ 03