ಮಡಿಕೇರಿ : ಕೊಡಗು ಪತ್ರಕರ್ತರ ಸಂಘದ ವಿರಾಜಪೇಟೆ ತಾಲೂಕು ಘಟಕದ ವತಿಯಿಂದ ಕಾಮಧೇನು ಗೋಶಾಲಾ ಸಂರಕ್ಷಣಾ ಟ್ರಸ್ಟ್, ಅಮ್ಮತ್ತಿ ಇವರ ಸಹಯೋಗದಲ್ಲಿ ದಿನಾಂಕ 03 ಆಗಸ್ಟ್ 2025ರಂದು ಕಥಾ ಸಮಯ. ಕಥೆ ಹೇಳುವ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಪತ್ರಕರ್ತರ ಸಂಘದ ತಾಲೂಕು ಘಟಕದ ಅಧ್ಯಕ್ಷ ಮುದೋಷ್ ಪೂವಯ್ಯ ಮಾಹಿತಿ ನೀಡಿದ್ದಾರೆ.
ಕಾವಾಡಿ ಅಮ್ಮತ್ತಿಯ ಕಾಮಧೇನು ಗೋಶಾಲಾ ಸಂರಕ್ಷಣಾ ಟ್ರಸ್ಟಿನ ಆವರಣದಲ್ಲಿ ಆಯೋಜಿತ ಕಥಾ ಸಮಯ ಕಾರ್ಯಕ್ರಮವನ್ನು ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ಉದ್ಘಾಟಿಸಲಿದ್ದಾರೆ. ಕೊಡಗು ಪತ್ರಿಕಾಭವನದ ಮ್ಯಾನೇಜಿಂಗ್ ಟ್ರಸ್ಟಿ ಎಂ.ಪಿ. ಕೇಶವ ಕಾಮತ್, ಕೊಡಗು ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ. ಅನಂತಶಯನ, ಹಿರಿಯ ಸಾಹಿತಿಗಳಾದ ಬಾಚರಣಿಯಂಡ ಅಪ್ಪಣ್ಣ, ಬಾರಿಯಂಡ ಜೋಯಪ್ಪ, ಅಸೀಮಾ ಮಾಸಪತ್ರಿಕೆಯ ಸಂಪಾದಕ ಮಾಣಿಪಂಡ ಸಂತೋಷ್ ತಮ್ಮಯ್ಯ, ಪಕ್ಷಿ ತಜ್ಞ ಡಾ. ಎಸ್.ವಿ. ನರಸಿಂಹನ್, ಕಾಮಧೇನು ಗೋಶಾಲಾ ಸಂರಕ್ಷಣಾ ಟ್ರಸ್ಟಿನ ಮ್ಯಾನೇಜಿಂಗ್ ಟ್ರಸ್ಟಿ ಕೆ. ರಾಮಚಂದ್ರ ಭಟ್, ಕೊಡಗು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ್ ಬಿಳಿಗೇರಿ, ಪತ್ರಕರ್ತರ ಸಂಘದ ವಿರಾಜಪೇಟೆ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಉಷಾ ಪ್ರೀತಂ ಕಾರ್ಯಕ್ರಮದಲ್ಲಿ ಹಾಜರಿರುತ್ತಾರೆ. ವಿದ್ಯಾರ್ಥಿ ವಿಭಾಗ ಮತ್ತು ಸಾರ್ವಜನಿಕ ವಿಭಾಗದಲ್ಲಿ ಪ್ರತೀ ಸ್ಪರ್ಧಿಗೆ ತಲಾ 3 ನಿಮಿಷಗಳಂತೆ ಕಥೆ ಹೇಳುವ ಸ್ಪರ್ಧೆ ಜರುಗಲಿದೆ ಎಂದೂ ಮುಲ್ಲೇಂಗಂಡ ಮುದೋಷ್ ಪೂವಯ್ಯ ಮಾಹಿತಿ ನೀಡಿದ್ದಾರೆ.