ಮಣಿಪಾಲ : ಹೆಜ್ಜೆ ಗೆಜ್ಜೆ ಫೌಂಡೇಶನ್ (ರಿ.) ಉಡುಪಿ-ಮಣಿಪಾಲ್ ಅರ್ಪಿಸುವ ‘ನೃತ್ಯವಾಹಿನಿ -5’ ಶಾಸ್ತ್ರೀಯ ನೃತ್ಯ ಸರಣಿ ಕಾರ್ಯಕ್ರಮವು ದಿನಾಂಕ 03 ಆಗಸ್ಟ್ 2025ರಂದು ಸಂಜೆ 6-00 ಗಂಟೆಗೆ ಉಡುಪಿಯ ಎಂ.ಜಿ.ಎಂ. ಕಾಲೇಜಿನ ಹತ್ತಿರ ಇರುವ ಹೆಜ್ಜೆ ಗೆಜ್ಜೆ ನೃತ್ಯ ಸ್ಟುಡಿಯೋದಲ್ಲಿ ನಡೆಯಲಿದೆ.
ವೀಣಾ ವಿನೋದಿನಿ ಮತ್ತು ವಿದುಷಿ ಪವನ ಬಿ. ಆಚಾರ್ ಮಣಿಪಾಲ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ವಿದುಷಿ ರಾಧಿಕಾ ಶೆಟ್ಟಿ ಇವರ ಶಿಷ್ಯೆ ಕುಮಾರಿ ಅದಿತಿ ಲಕ್ಷ್ಮಿ ಭಟ್ ಮಂಗಳೂರು ಇವರು ಭರತನಾಟ್ಯ ಪ್ರದರ್ಶನ ನೀಡಲಿದ್ದಾರೆ.