ಬೆಂಗಳೂರು : ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಇವರ ವತಿಯಿಂದ ಮತ್ತು ನಾಟ್ಕ ಬೆಂಗಳೂರು ಇವರ ಸಹಕಾರದೊಂದಿಗೆ ‘ರಂಗಸಂವಾದ -07’ ಕಾರ್ಯಕ್ರಮವನ್ನು ದಿನಾಂಕ 02 ಆಗಸ್ಟ್ 2025ರಂದು ಸಂಜೆ 5-00 ಗಂಟೆಗೆ ಬೆಂಗಳೂರಿನ ಜೆ.ಸಿ. ರಸ್ತೆ, ಕನ್ನಡ ಭವನ, ಕರ್ನಾಟಕ ನಾಟಕ ಅಕಾಡೆಮಿ ಕಛೇರಿ ಆವರಣದ ರಂಗಚಾವಡಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ರಂಗಕರ್ಮಿಗಳು ಹಾಗೂ ಕಲಾ ನಿರ್ದೇಶಕರಾದ ಶಶಿಧರ್ ಅಡಪ ಇವರು ತಿಂಗಳ ಅತಿಥಿಯಾಗಿ ಭಾಗವಹಿಸಲಿದ್ದು, ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷರಾದ ಡಾ. ಕೆ.ವಿ. ನಾಗರಾಜಮೂರ್ತಿ ಇವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.