ಮಂಗಳೂರು : ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲಾ ಶಾಸ್ತ್ರೀಯ ನೃತ್ಯ ಕಲಾವಿದರ ಸಂಘಟನೆ ಕರ್ನಾಟಕ ಕರಾವಳಿ ನೃತ್ಯ ಕಲಾಪರಿಷತ್ (ರಿ.) ಮಂಗಳೂರು ಇದರ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ದಿನಾಂಕ 03 ಆಗಸ್ಟ್ 2025ರಂದು ಅಪರಾಹ್ನ 3-30 ಗಂಟೆಗೆ ಮಂಗಳೂರಿನ ಶರವು ಮಹಾಗಣಪತಿ ದೇವಸ್ಥಾನದ ಧ್ಯಾನ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ಶರವು ಮಹಾಗಣಪತಿ ದೇವಸ್ಥಾನದ ಶಿಲಾ ಶಿಲಾ ಆಡಳಿತ ಮೊಕ್ತೇಸರರಾದ ರಾಘವೇಂದ್ರ ಶಾಸ್ತ್ರಿಯವರು ಶುಭಾಸಂಶನೆಗೈಯಲಿದ್ದು, ಇದೇ ಸಂದರ್ಭದಲ್ಲಿ ವಿದುಷಿ ಶ್ರೀವಿದ್ಯಾ ಇವರ ಶಿಷ್ಯೆ ರೆಮೋನಾ ಎವೆಟ್ ಪಿರೇರಾ ಇವರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ.