ಮಂಗಳೂರು : ಎಸ್.ಆರ್. ಹೆಗ್ದೆ ಚಾರಿಟೇಬಲ್ ಟ್ರಸ್ಟ್ (ರಿ.) ಸುರತ್ಕಲ್ ಇದರ ವತಿಯಿಂದ ಚೇಳ್ಯಾರು ಗುತ್ತಿನ ಮನೆಯಲ್ಲಿ ದಿನಾಂಕ 16 ಆಗಸ್ಟ್ 2025ರಂದು ಬೆಳಿಗ್ಗೆ 10-00 ಗಂಟೆಗೆ ಸೋಣದ ಸಂಕ್ರಾಂತಿ, ಆಗೋಳಿ ಮಂಜಣ್ಣ ನೆಂಪು ಮತ್ತು ಚೇಲ್ಯಾರು ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢ ಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವು ನಡೆಯಲಿದೆ.
ಎಸ್.ಆರ್. ಹೆಗ್ಡೆ ಚಾರಿಟೇಬಲ್ ಟ್ರಸ್ಟಿನ ಅಧ್ಯಕ್ಷೆ ಮತ್ತು ಸಂಶೋಧಕಿ ಡಾ. ಇಂದಿರಾ ಹೆಗ್ಗಡೆ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಗೋವಿಂದ ದಾಸ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಕೃಷ್ಣ ಮೂರ್ತಿ ಪಿ. ಇವರು ಉಪನ್ಯಾಸ ನೀಡಲಿದ್ದಾರೆ. ಚೇಳ್ಯಾರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪಾಧ್ಯಕ್ಷರಾದ ವೆಂಕಟೇಶ್ ಶೆಟ್ಟಿ, ಸದಸ್ಯ ಪುಷ್ಪರಾಜ್ ಶೆಟ್ಟಿ ಮತ್ತು ಸರಕಾರಿ ಪ್ರೌಢ ಶಾಲಾ ವಿಭಾಗದ ಮುಖ್ಯ ಶಿಕ್ಷಕಿ ತೆರಸಾ ವೇಗಸ್ ಮುಖ್ಯ ಅತಿಥಿಗಳಾಗಿರುತ್ತಾರೆ. ಚೇಳ್ಯಾರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಜ್ಯೋತಿ ಚೇಳ್ಯಾರು ಹಾಗೂ ಚೇಳ್ಯಾರು ಗುತ್ತಿನ ಕಸ್ತೂರಿ ಇವರು ಉಪಸ್ಥಿತರಿರುತ್ತಾರೆ.