ಮೈಸೂರು : ನಿರಂತರ ಫೌಂಡೇಶನ್ (ರಿ.) ಮೈಸೂರು ಆಯೋಜಿಸಿರುವ ‘ಸಹಜ ರಂಗ 2025’ ಕಾಲೇಜು ವಿದ್ಯಾರ್ಥಿಗಳಿಗೆ ‘ರಂಗ ತರಬೇತಿ ಶಿಬಿರ’ವು ದಿನಾಂಕ 17 ಆಗಸ್ಟ್ 2025ರಂದು ಮೈಸೂರಿನ ಮಾನಸಗಂಗೋತ್ರಿ ಗಾಂಧಿಭವನ ಆವರಣದಲ್ಲಿ ಉದ್ಘಾಟನೆಗೊಳ್ಳಲಿದೆ.
ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಲಾಯ ಬೆಂಗಳೂರು ಇದರ ಸಹಕಾರದೊಂದಿಗೆ ಹಮ್ಮಿಕೊಂಡ ಈ ಕಾರ್ಯಕ್ರಮದಲ್ಲಿ ಹಿರಿಯ ರಂಗಕರ್ಮಿ ಡಾ. ಸಿ. ಬಸವಲಿಂಗಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಡಾ. ಎಂ.ಡಿ. ಸುದರ್ಶನ್, ಗಾಂಧಿ ಅಧ್ಯಯನ ಕೇಂದ್ರದ ನಿರ್ದೇಶಕರಾದ ಡಾ. ನರೇಂದ್ರ ಕುಮಾರ್ ಮತ್ತು ಪ್ರಸಾದ್ ಕುಂದೂರು ಇವರುಗಳು ಭಾಗವಹಿಸಲಿದ್ದಾರೆ.