ಕುಶಾಲನಗರ : ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ (ರಿ.) ಬೆಂಗಳೂರು ಇದರ ಕೊಡಗು ಜಿಲ್ಲಾ ಘಟಕದ ಆಶ್ರಯದಲ್ಲಿ 79ನೇ ಸ್ವಾತಂತ್ರೋತ್ಸವದ ಅಂಗವಾಗಿ ದಿನಾಂಕ 17 ಆಗಸ್ಟ್ 2025ರಂದು ಕುಶಾಲನಗರದ ಮಹಿಳಾ ಸಮಾಜದ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಕವಿಗೋಷ್ಟಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ರಾಜ್ಯ ಒಳಚರಂಡಿ ಅಭಿವೃದ್ಧಿ ನಿಗಮ ಮಾಜಿ ಅಧ್ಯಕ್ಷೆ ಕೆ.ಪಿ. ಚಂದ್ರಕಲಾ ಗಿಡಕ್ಕೆ ನೀರು ಹಾಕುವ ಮೂಲಕ ಚಾಲನೆಯಲ್ಲಿ ನೀಡಿದರು. ಸಾಹಿತ್ಯದ ನುಡಿಗಳನ್ನು ಹಿರಿಯ ಸಾಹಿತಿ ಭಾರಧ್ವಜ್ ಆನಂದ ತೀರ್ಥ ನುಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಜಿಲ್ಲಾಧ್ಯಕ್ಷ ಹೆಚ್.ಎಂ. ರಘುಕೋಟಿ ವಹಿಸಿದರು. ವೇದಿಕೆಯಲ್ಲಿ ರಾಣಿ ರವೀಂದ್ರ, ಮಾಲದೇವಿ ಮೂರ್ತಿ, ಉಪನ್ಯಾಸಕ ಮಹೇಂದ್ರ ಉಪಸ್ಥಿತರಿದ್ದರು. ಜಿಲ್ಲೆಯ ನಾನಾ ಕಡೆಗಳಿಂದ ಆಗಮಿಸಿದ ಕವಿಗಳು ತಮ್ಮ ಕವನವನ್ನು ಪ್ರಸ್ತುತ ಪಡಿಸಿ ನೆರೆದಿದ್ದ ಪ್ರೇಕ್ಷಕರ ಮನಸೂರೆಗೊಂಡರು.