ಶಿವಮೊಗ್ಗ : ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಜಿಲ್ಲಾ ಸಮಿತಿ ಶಿವಮೊಗ್ಗ, ಸಹ್ಯಾದ್ರಿ ಕಲಾ ಕಾಲೇಜು ಶಿವಮೊಗ್ಗ ಇವರ ಸಹಯೋಗದಲ್ಲಿ ವಿಶ್ವ ಜಾನಪದ ದಿನಾಚರಣೆ ಅಂಗವಾಗಿ ‘ಜಾನಪದ ಕಲೆಗಳ ಕಲಾ ಪ್ರದರ್ಶನ’ವನ್ನು ದಿನಾಂಕ 22 ಆಗಸ್ಟ್ 2025ರಂದು ಬೆಳಿಗ್ಗೆ 10-30 ಗಂಟೆಗೆ ಶಿವಮೊಗ್ಗದ ಸಹ್ಯಾದ್ರಿ ಕಲಾ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕನ್ನಡ ಸಾಹಿತ್ಯ ಪರಿಷತ್ತು ಇದರ ಅಧ್ಯಕ್ಷರಾದ ಡಿ. ಮಂಜುನಾಥ ಇವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಸಹ್ಯಾದ್ರಿ ಕಲಾ ಕಾಲೇಜಿನ ಪ್ರಿನ್ಸಿಪಾಲರಾದ ಪ್ರೊ. ಎಸ್. ಸಿರಾಜ್ ಅಹಮದ್ ಇವರು ಉದ್ಘಾಟನೆ ಮಾಡಲಿದ್ದಾರೆ. ಖ್ಯಾತ ಜನಪದ ವಿದ್ವಾಂಸರಾದ ಡಾ. ಅಪ್ಪಗೆರೆ ತಿಮ್ಮರಾಜು ಇವರು ಕಲಾ ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ.