ಮೂಡುಬಿದಿರೆ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೂಡುಬಿದಿರೆ ತಾಲೂಕು ಘಟಕ ಮತ್ತು ಎಸ್.ಎನ್.ಎಂ. ಪಾಲಿಟೆಕ್ನಿಕ್ ಕಾಲೇಜು ಮೂಡುಬಿದಿರೆ ಇದರ ಸಹಯೋಗದಲ್ಲಿ ‘ಕನ್ನಡ ಕಂಪು’ ಕನ್ನಡ ಕಲರವ ಮತ್ತು ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ 28 ಆಗಸ್ಟ್ 2025ರಂದು ಅಪರಾಹ್ನ 3-00 ಗಂಟೆಗೆ ಎಸ್.ಎನ್.ಎಂ. ಪಾಲಿಟೆಕ್ನಿಕ್ ಕಾಲೇಜು ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೂಡುಬಿದಿರೆ ತಾಲೂಕು ಘಟಕದ ಅಧ್ಯಕ್ಷರಾದ ವೇಣುಗೋಪಾಲ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ‘ಕನ್ನಡ ಭಾಷಾ ಪ್ರೇಮ ಮತ್ತು ಯುವಜನತೆ’ ಎಂಬ ವಿಷಯದ ಬಗ್ಗೆ ಮೂಡುಬಿದಿರೆ ಜೈನ್ ಪ್ರೌಢ ಶಾಲೆಯ ಕನ್ನಡ ಪ್ರಾಧ್ಯಾಪಕರಾದ ನಿತೇಶ್ ಬಲ್ಲಾಳ್ ಇವರು ಉಪನ್ಯಾಸ ನೀಡಲಿದ್ದಾರೆ.