ಉಡುಪಿ : ಉಡುಪಿ ಜಿಲ್ಲಾ ಕರ್ಣಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೇವಾ ಮತ್ತು ಸಾಂಸ್ಕೃತಿಕ ವೇದಿಕೆ ಉದ್ಯಾವರ ಫ್ರೆಂಡ್ಸ್ ಸರ್ಕಲ್ ಇದರ ವತಿಯಿಂದ ‘ಮಂಜಣ್ಣನ ನೆನಪು’ ಹದಿಮೂರು ಮಂಜುನಾಥ ಉದ್ಯಾವರ ಸಂಸ್ಮರಣಾ ಕಾರ್ಯಕ್ರಮವನ್ನು ದಿನಾಂಕ 31 ಆಗಸ್ಟ್ 2025ರಂದು ಸಂಜೆ 5-00 ಗಂಟೆಗೆ ಉದ್ಯಾವರ ಶ್ರೀ ವಿಠೋಬ ರುಖುಮಾಯಿ ನಾರಾಯಣ ಗುರು ಮಂದಿರದಲ್ಲಿ ಆಯೋಜಿಸಲಾಗಿದೆ.
ಈ ಕಾರ್ಯಕ್ರಮವನ್ನು ಮಾಜಿ ಸಚಿವರಾದ ಕೆ. ಜಯಪ್ರಕಾಶ್ ಹೆಗ್ಡೆ ಇವರು ಉದ್ಘಾಟನೆ ಮಾಡಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಪ್ರಜ್ಞಾನಂ ಟ್ರಸ್ಟ್ (ರಿ.) ಉಡುಪಿ ಪ್ರಸ್ತುತಿಯಲ್ಲಿ ವಿದುಷಿ ಸಂಸ್ಕೃತಿ ಪ್ರಭಾಕರ್ ಅಭಿನಯಿಸುವ ಏಕವ್ಯಕ್ತಿ ರಂಗಪ್ರಯೋಗ ‘ಹೆಜ್ಜೆಗೊಲಿದ ಬೆಳಕು’ ನಾಟ್ಯರಾಣಿ ಶಾಂತಲೆಯ ಆತ್ಮವೃತ್ತ ಪ್ರಸ್ತುತಗೊಳ್ಳಲಿದೆ.