ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯ ಇದರ ವತಿಯಿಂದ ಹಾಗೂ ಮಹಾತ್ಮಾ ಗಾಂಧಿ ಶಾಂತಿ ಪ್ರತಿಷ್ಠಾನ (ರಿ.) ಮಂಗಳೂರು ಸಹಯೋಗದಲ್ಲಿ ಪ್ರೊ. ಕೆ.ಈ. ರಾಧಾಕೃಷ್ಣ ಅನುವಾದಿಸಿರುವ ನೇತಾಜಿ ಸುಭಾಶ್ ಚಂದ್ರ ಬೋಸರ ಮೂರು ಪುಸ್ತಕಗಳ ಲೋಕಾರ್ಪಣೆ ಸಮಾರಂಭವು ದಿನಾಂಕ 31 ಆಗಸ್ಟ್ 2025ರಂದು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ನಡೆಯಲಿದೆ.
ಮಾನ್ಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಇವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮವನ್ನು ಮಾನ್ಯ ಆರೋಗ್ಯ ಸಚಿವರಾದ ದಿನೇಶ್ ಗುಂಡೂ ರಾವ್ ಇವರು ಉದ್ಘಾಟನೆ ಮಾಡಲಿದ್ದಾರೆ. ಬಹುಶ್ರುತ ವಿದ್ವಾಂಸರಾದ ನಾರಾಯಣ ಯಾಜಿ ಕೃತಿ ಪರಿಚಯ ಮಾಡಲಿದ್ದಾರೆ.