ರಾಮನಗರ : ಚುಟುಕು ಸಾಹಿತ್ಯ ಪರಿಷತ್ತು ರಾಮನಗರ ಹಾಗೂ ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘ (ರಿ.) ಕಮತಗಿಯ ಸಹಯೋಗದಲ್ಲಿ ದಿನಾಂಕ 30 ಆಗಸ್ಟ್ 2025ರಂದು ರಾಮನಗರದ ನ್ಯೂ ಎಕ್ಸ್ ಪರ್ಟ್ ಕಾಲೇಜಿನ ಸಭಾಂಗಣದಲ್ಲಿ ಸಾಹಿತಿಗಳು, ಕಲಾವಿದರು ಹಾಗೂ ಪೊಲೀಸ್ ಅಧಿಕಾರಿಗಳಾದ ಡಾ. ಶೈಲೇಶ್ ಕಾಕೋಳು ಇವರ ಸರ್ವಾಧ್ಯಕ್ಷತೆಯಲ್ಲಿ ‘ಚುಟುಕು ಸಾಹಿತ್ಯ ಸಮ್ಮೇಳನ’ವನ್ನು ಹಮ್ಮಿಕೊಳ್ಳಲಾಗಿದೆ. ಸಮಾರಂಭದಲ್ಲಿ ಚುಟುಕು ಕವಿಗೋಷ್ಠಿ, ಉಪನ್ಯಾಸ, ವಿಚಾರಗೋಷ್ಠಿ, ಪುಸ್ತಕ ಬಿಡುಗಡೆ, ಪ್ರಶಸ್ತಿ ಪ್ರಾದಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.
ಚುಟುಕು ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಡಾ. ಎಂ.ಜಿ.ಆರ್. ಅರಸು ಇವರ ಅಧ್ಯಕ್ಷತೆಯಲ್ಲಿ ಮಾಜಿ ಶಾಸಕರಾದ ಕೆ. ರಾಜು ಇವರು ಈ ಸಮ್ಮೇಳನದ ಉದ್ಘಾಟನೆ ಮಾಡಲಿದ್ದಾರೆ. ವಿಚಾರಗೋಷ್ಠಿಯಲ್ಲಿ ‘ಚುಟುಕು ಸಾಹಿತ್ಯ ಬೆಳೆದು ಬಂದ ಹಾದಿ’ ಎಂಬ ವಿಷಯದ ಬಗ್ಗೆ ಸಾಹಿತಿ ರಮೇಶ ಹೊಸದೊಡ್ಡಿ ಇವರು ಉಪನ್ಯಾಸ ನೀಡಲಿದ್ದಾರೆ. ಹಿರಿಯ ಸಾಹಿತಿ ಕೂ.ಗಿ. ಗಿರಿಯಪ್ಪ ಇವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ಪ್ರಸ್ತುತಗೊಳ್ಳಲಿದ್ದು, ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ಪ್ರದಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.