ಕಾಸರಗೋಡು : ಕಡಬ ಸಂಸ್ಮರಣಾ ಸಮಿತಿ ರಥಬೀದಿ ಮಂಗಳೂರು ಇದರ 6ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವು ದಿನಾಂಕ 31 ಆಗಸ್ಟ್ 2025ರಂದು ಅಪರಾಹ್ನ 2-00 ಗಂಟೆಗೆ ಕಾಸರಗೋಡಿನ ಶ್ರೀ ಕ್ಷೇತ್ರ ಎಡನೀರು ಮಠದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ‘ಕಡಬ ವಿನಯ ನಾರಾಯಣ ಆಚಾರ್ಯ ಸಂಸ್ಮರಣಾ ಪ್ರಶಸ್ತಿ’ ಪ್ರದಾನ ಹಾಗೂ ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ.
ಈ ಕಾರ್ಯಕ್ರಮ ಅಧ್ಯಕ್ಷತೆಯನ್ನು ಕಡಬ ಸಂಸ್ಮರಣಾ ಸಮಿತಿಯ ಅಧ್ಯಕ್ಷರಾದ ಶ್ರೀ ಸುಂದರ ಆಚಾರ್ಯ ಬೆಳುವಾಯಿ ಇವರು ವಹಿಸಲಿದ್ದು, ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಡಾ. ಟಿ. ಶ್ಯಾಮ್ ಭಟ್ ಇವರು ದೀಪ ಪ್ರಜ್ವಲನೆ ಮಾಡಿ ಉದ್ಘಾಟನೆ ಮಾಡಲಿರುವರು. ಹಿರಿಯ ಭಾಗವತರಾದ ದಿನೇಶ ಅಮ್ಮಣ್ಣಾಯ ಇವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಹಿರಿಯ ಕಲಾವಿದರಾದ ಎಂ.ಕೆ. ರಮೇಶ ಆಚಾರ್ಯ ಇವರು ಸಂಸ್ಮರಣಾ ಭಾಷಣ ಹಾಗೂ ತಾಳಮದ್ದಲೆ ಅರ್ಥಧಾರಿ ವಿಶ್ವೇಶ್ವರ ಭಟ್ ಇವರು ಅಭಿನಂದನಾ ಭಾಷಣ ಮಾಡಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಜಿಲ್ಲೆಯ ಸುಪ್ರಸಿದ್ಧ ಕಲಾವಿದರುಗಳಿಂದ ‘ಸುರಭಿಜಾತೆ’ ತಾಳಮದ್ದಲೆ ಮತ್ತು ‘ಶ್ರೀ ರಾಮ ದರ್ಶನ’ ಯಕ್ಷಗಾನ ಪ್ರದರ್ಶನ ನಡೆಯಲಿದೆ.