ಮಂಗಳೂರು : ಜೀರುಂಡೆ ಪುಸ್ತಕ ಇದರ ವತಿಯಿಂದ ಫಾತಿಮಾ ರಲಿಯಾ ಅವರ ‘ಕೀಮೋ’ ಅನುಭವ ಕಥನ ಪುಸ್ತಕ ಬಿಡುಗಡೆ ಸಮಾರಂಭವನ್ನು ದಿನಾಂಕ 07 ಸೆಪ್ಟೆಂಬರ್ 2025ರಂದು ಸಂಜೆ 4-00 ಗಂಟೆಗೆ ಸಂತ ಅಲೋಶಿಯಸ್ ಕಾಲೇಜಿನ ರೊಬರ್ಟ್ ಸಿಕ್ವೇರಾ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ಡಾ. ಶ್ರೀನಿವಾಸ ಕಕ್ಕಿಲ್ಲಾಯ ಇವರು ಪುಸ್ತಕ ಬಿಡುಗಡೆ ಮಾಡಲಿದ್ದು, ರಮ್ಯಾ ಕೆ.ಜಿ. ಮೂರ್ನಾಡು ಮತ್ತು ಶರೀಫ್ ಹಿಮಮಿ ಶೆಟ್ಟಿಕೊಪ್ಪ ಪುಸ್ತಕದ ಬಗ್ಗೆ ಮಾತನಾಡಲಿದ್ದಾರೆ. ಭಾಷೆ ಮತ್ತು ಸಂಸ್ಕೃತಿ ಅಧ್ಯಯನ ನಿಕೇತನ, ಕನ್ನಡ ವಿಭಾಗ ರಂಗ ಅಧ್ಯಯನ ಕೇಂದ್ರ, ಸಂತ ಅಲೋಶಿಯಸ್ ಪರಿಗಣಿತ ವಿಶ್ವ ವಿದ್ಯಾಲಯ ಮಂಗಳೂರು ಮತ್ತು ಉಡುಗೊರೆ ಪ್ರಕಾಶನ ಇವುಗಳ ಸಹಯೋಗದೊಂದಿಗೆ ಈ ಕಾರ್ಯಕ್ರಮ ನಡೆಯಲಿದೆ.