ಮಂಗಳೂರು : ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ರಥಬೀದಿ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ 114ನೇ ‘ಸಾಹಿತ್ಯ ಅಭಿರುಚಿ ಕಾರ್ಯಕ್ರಮ’ವನ್ನು ದಿನಾಂಕ 09 ಸೆಪ್ಟೆಂಬರ್ 2025ರಂದು ಪೂರ್ವಾಹ್ನ ಗಂಟೆ 02-45ಕ್ಕೆ ಮಂಗಳೂರು ರಥಬೀದಿಯಲ್ಲಿರುವ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ.
ರಥಬೀದಿಯಲ್ಲಿರುವ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಭಾರತಿ ಬಾಯಿ ಕೆ. ಇವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಮೈ ಅಂತರಾತ್ಮ ಮ್ಯಾನೇಜ್ಮೆಂಟ್ ಕನ್ಸಲ್ಟೆಂಟ್ ಇದರ ಸಂಸ್ಥಾಪಕರು ಹಾಗೂ ಅಂಕಣಕಾರರಾದ ವೇಣು ಶರ್ಮ, ಉಪನ್ಯಾಸಕಿ ಪ್ರೊ. ಅಕ್ಷಯ ಆರ್. ಶೆಟ್ಟಿ ಮತ್ತು ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ ಇದರ ಅಧ್ಯಕ್ಷರಾದ ಚಂಚಲ ತೇಜೋಮಯ ಇವರುಗಳು ಮುಖ್ಯ ಸಂಪನ್ಮೂಲ ಅತಿಥಿಗಳಾಗಿ ಭಾಗವಹಿಸಲಿರುವರು.