ಕಮತಗಿ : ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘ (ರಿ.) ಕಮತಗಿ ಹಾಗೂ ದಸರಾ ಉತ್ಸವ ಸಮಿತಿ ವತಿಯಿಂದ ‘ದಸರಾ ಉತ್ಸವ-2025’ ದಿನಾಂಕ 30 ಸೆಪ್ಟೆಂಬರ್ 2025ರಂದು ಬಾಗಲಕೋಟೆ ಜಿಲ್ಲೆಯ ಕಮತಗಿಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮವನ್ನು ಕವಿಗಳು, ಕಲಾವಿದರಿಗೆ ವೇದಿಕೆ ಕಲ್ಪಿಸಿಕೊಡುವುದಕ್ಕಾಗಿ ಆಯೋಜನೆ ಮಾಡುತ್ತಿದ್ದು, ಕಾರ್ಯಕ್ರಮದಲ್ಲಿ ಕವಿಗೋಷ್ಠಿ, ಗಜಲ್ ಗೋಷ್ಠಿ, ವಿಚಾರ ಸಂಕಿರಣ, ಜಾನಪದ ಕಲಾ ಪ್ರದರ್ಶನ, ಪುಸ್ತಕ ಬಿಡುಗಡೆ, ಯುವ ಬರಹಗಾರರ ಪುಸ್ತಕಗಳಿಗೆ ‘ಮೇಘಮೈತ್ರಿ ಪುಸ್ತಕ ಪ್ರಶಸ್ತಿ’ ಪ್ರದಾನ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ವಿವಿಧ ಕ್ಷೇತ್ರದಲ್ಲಿ ಸೇವೆಗೈದ ಸಾಧಕರಿಗೆ ‘ದಸರಾ ಗೌರವ ಪುರಸ್ಕಾರ’ ನೀಡಿ ಗೌರವಿಸಲಾಗುವುದು. ವೇದಿಕೆಯಲ್ಲಿ ನಾಡಿನ ಗಣ್ಯರು ಭಾಗವಹಿಸಲಿದ್ದು, ತಾವುಗಳು ಈ ಉತ್ಸವದಲ್ಲಿ ಭಾಗವಹಿಸಲು ಇಚ್ಚಿಸುವವರು ತಮ್ಮ ಹೆಸರನ್ನು ಈ ಕೆಳಗಿನ ಮೊಬೈಲ್ ನಂಬರ್ ಗೆ ಕರೆಮಾಡಿ ನೊಂದಣಿ ಮಾಡಿಕೊಳ್ಳಬೇಕು. ಎಂ. ರಮೇಶ ಕಮತಗಿ : 9686782774
ವಿಶೇಷ ಸೂಚನೆ :
*ಉತ್ಸವದಲ್ಲಿ ಭಾಗವಹಿಸುವ ಕವಿ-ಕಲಾವಿದರಿಗೆ ಊಟದ ವ್ಯವಸ್ಥೆ.
*ಪ್ರಮಾಣ ಪತ್ರ ಮತ್ತು ನೆನಪಿನ ಕಾಣಿಕೆ ಹಾಗೂ ಒಂದು ಪುಸ್ತಕ ನೀಡಲಾಗುವುದು (ಗೌರವ ಧನ ಮತ್ತು ಟಿ.ಎ, ಡಿ.ಎ ಇರುವುದಿಲ್ಲ).
*ಕವಿತೆ ಓದುವ ಕವಿಗಳಿಗೆ ಮತ್ತು ಕಲಾವಿದರಿಗೆ ಸಮಯದ ಮಿತಿ ಇರುತ್ತದೆ.
*ಕರ್ನಾಟಕದ ಬೇರೆ ಯಾವ ಜಿಲ್ಲೆಯವರು ಬೇಕಾದರು ಭಾಗವಹಿಸಬಹುದು.
*ಹೆಸರು ನೋಂದಾಯಿಸಲು ಕೊನೆಯ ದಿನಾಂಕ 20 ಸೆಪ್ಟೆಂಬರ್ 2025