ಮೈಸೂರು : ಮೈಸೂರಿನ ಕೊಡಗು ಗೌಡ ಸಮಾಜ ಆಯೋಜಿಸಿದ ಕೈಲ್ ಮುಹೂರ್ತ ಸಮಾರಂಭವು ದಿನಾಂಕ 14 ಸೆಪ್ಟೆಂಬರ್ 2025ರ ಭಾನುವಾರದಂದು ಮೈಸೂರಿನ ಕೊಡಗು ಗೌಡ ಸಮಾಜದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಉದ್ಘಾಟಿಸಿದ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿಯ ಅಧ್ಯಕ್ಷರಾದ ಸದಾನಂದ ಮಾವಜಿ ಮಾತನಾಡಿ “ಅರೆಭಾಷೆ ಸಂಸ್ಕೃತಿ, ಸಂಪ್ರದಾಯಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸಿ, ಅವರು ಅವುಗಳನ್ನು ಅನುಸರಿಸಿ ಮುನ್ನಡೆಯುವಂತೆ ಹಿರಿಯರು ಪ್ರೇರಣೆ ನೀಡಬೇಕು. ಯುವ ಪೀಳಿಗೆ ನಮ್ಮ ಭಾಷೆ ಮತ್ತು ಸಂಸ್ಕೃತಿಯ ಬಗ್ಗೆ ಪ್ರೀತಿ ಬೆಳೆಸಿಕೊಂಡಾಗ ಮಾತ್ರ ಸಂಸ್ಕೃತಿ ಉಳಿಯಲು ಸಾಧ್ಯ. ಅರೆಭಾಷೆ ಬೆಳವಣಿಗೆಗೆ ಸಂಬಂಧಿಸಿದಂತೆ ಯಾವುದೇ ಕಾರ್ಯಕ್ರಮಗಳನ್ನು ಹಮ್ಮಿಕೊಂಡಾಗ ಅಕಾಡೆಮಿಯಿಂದ ಸಾಧ್ಯವಾದಷ್ಟು ಅನುದಾನ ಕೂಡಲು ಪ್ರಯತ್ನಿಸುತ್ತೇನೆ” ಎಂದು ಭರವಸೆ ನೀಡಿದರು.
ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಆನಂದ ಕರಂದ್ಲಾಜೆ ಮಾತನಾಡಿ “ನಮ್ಮ ಸಾಂಪ್ರದಾಯಿಕ ಆಚರಣೆಗಳನ್ನು ಕೇವಲ ಸಾಂಕೇತಿಕವಾಗಿ ಮಾತ್ರ ಆಚರಣೆ ಮಾಡದೆ, ಮನೆ ಮನಗಳಲ್ಲೂ ಆಚರಣೆ ಮಾಡಿದಾಗ ಸಂಸ್ಕೃತಿ ಗಟ್ಟಿಯಾಗಿ ಉಳಿಯಲು ಸಾಧ್ಯವಾಗುತ್ತದೆ. ಮೈಸೂರು ಗೌಡ ಸಮಾಜದ ಕಾರ್ಯ ಶೈಲಿಯನ್ನು ಪ್ರಶಂಸನೀಯ. ಎಲ್ಲಾ ಸಮಾಜಗಳು ಇದೇ ಮಾದರಿಯಲ್ಲಿ ಕಾರ್ಯ ಪ್ರವೃತ್ತರಾಗುವ ಅಗತ್ಯವಿದೆ. ಕೊಡಗು ಗೌಡ ಸಮಾಜ ಒಕ್ಕೂಟ ಎಲ್ಲಾ ಗೌಡ ಸಮಾಜಗಳ ಪ್ರಗತಿಗಾಗಿ ಶ್ರಮಿಸುವುದಲ್ಲದೆ, ಆ ಸಮಾಜಗಳ ಮೂಲಕ ಜನಾಂಗದ ಅಭಿವೃದ್ಧಿ ಪಡಿಸಲು ಪ್ರಯತ್ನಿಸುತ್ತಿದೆ” ಎಂದು ತಿಳಿಸಿದರು.
ಕರ್ನಾಟಕ ಆರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿಯ ಸದಸ್ಯರಾದ ಚಂದ್ರಾವತಿ ಬಡ್ಡಡ್ಕ ಮಾತನಾಡಿ “ಅರೆಭಾಷೆಯನ್ನು ಉಳಿಸಿ ಬೆಳೆಸಲು ಅಕಾಡೆಮಿಯು ಶಾಲಾ ಕಾಲೇಜುಗಳಲ್ಲಿ ಅರೆಭಾಷೆ ಸಂಘಗಳನ್ನು ಸ್ಥಾಪಿಸಿ, ವಿವಿಧ ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳಲ್ಲಿ ಸ್ವಲನಶೀಲತೆಯನ್ನು ಬೆಳೆಸಲು ಪ್ರಯತ್ನ ನಡೆಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರದಿಂದ ಮೈಸೂರಿನಲ್ಲೂ ಕಾರ್ಯಕ್ರರು ಹಮ್ಮಿಕೊಳ್ಳಲಾಗುವುದು” ಎಂದು ತಿಳಿಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮೈಸೂರು ಕೊಡಗು ಗೌಡ ಸಮಾಜದ ಅಧ್ಯಕ್ಷರಾದ ಕೂಂಬಾರನ ಬನಪ್ಪ ಮಾತನಾಡಿ ಪ್ರಾಚೀನ ಕಾಲದಲ್ಲಿ ಕೊರಗಿನಲ್ಲಿ ಕೃಷಿ ಚಟುವಟಿಕೆ ಮುಗಿದ ನಂತರ ಆಚರಿಸುತ್ತಿದ್ದ ಕೈಲ್ ಮುಹೂರ್ತ ಹಬ್ಬದ ವೈಶಿಷ್ಟತೆಯನ್ನು ಸಭೆಗೆ ವಿವರಿಸಿದರು “ಸಮಾಜದ ಹಿರಿಯರು ಆಚರಿಸಿಕೊಂಡು ಬಂದ ಸಂಸ್ಕೃತಿ ಆಚಾರ ವಿಚಾರಗಳನ್ನು ಮುಂದಿನ ತಲೆಮಾರಿಗೆ ಪರಿಚಯಿಸಲು ಇಂತಹ ಕಾರ್ಯಕ್ರಮಗಳನ್ನು ಪ್ರತೀ ವರ್ಷ ಹಮ್ಮಿಕೊಳ್ಳಲಾಗುತ್ತಿದೆ” ಎಂದರು.
ಕಾರ್ಯಕ್ರಮದಲ್ಲಿ ಮೈಸೂರು ಕೊಡಗು ಗೌಡ ಸಮಾಜದ ಪದಾಧಿಕಾರಿಗಳಾದ ಕುದುಪಜೆ ಚಂದ್ರಶೇಖರ್, ನಡುವೆಟ್ಟಿರ ಲಕ್ಷ್ಮಣ್, ನಡುಮನೆ ಚಿಂಗಪ್ಪ, ನಿರ್ದೇಶಕರಾದ ಹೊಸೊರು ರಾಘವ, ಕುಂಟುಪುಣಿ ರಮೇಶ್, ಕೊಂಚಾರನ ಸುಬ್ಬಯ್ಯ, ಪಾಣತ್ತಲೆ ವಸಂತ್, ತೋಟಂಬೈಲು ಇಂದಿರಾ, ಚಪ್ಪೆರ ಯಮುನಾ, ಕುಂಟುಪುಣಿ ಶೀಲ ಮೊದಲಾದವರು ಉಪಸ್ಥಿತರಿದ್ದರು.
ಮೈಸೂರು ಕೊಡಗು ಗೌಡ ಸಮಾಜದ ಕಾರ್ಯದರ್ಶಿ ನಂದ ಸ್ವಾಗತಿಸಿ, ಸಮಾಜದ ನಿರ್ದೇಶಕ ಪಟ್ಟಡ ಶಿವಕುಮಾರ್ ಕಾರ್ಯಕ್ರಮ ನಿರೂಪಿಸಿ, ಮೈಸೂರಿನ ಕೊಡಗು ಮತ್ತು ದಕ್ಷಿಣ ಕನ್ನಡ ಮಹಿಳಾ ಒಕ್ಕೂಟದ ಅಧ್ಯಕ್ಷ ನಡುವಟ್ಟಿರ ಗೀತಾ ಲಕ್ಷ್ಮಣ ವಂದಿಸಿದರು.
Subscribe to Updates
Get the latest creative news from FooBar about art, design and business.
Previous Article‘ಅನುಪಲ್ಲವಿ’ಯಲ್ಲಿ ನವೀಕರಣಗೊಂಡ ಸಭಾಂಗಣದ ಲೋಕಾರ್ಪಣೆ
Next Article ಪಾವಂಜೆಯಲ್ಲಿ ಯಕ್ಷಗಾನ ಬಯಲಾಟ | ಸೆಪ್ಟೆಂಬರ್ 17