ಬೆಂಗಳೂರು: ಪ್ರಸಿದ್ಧ ಸಂಶೋಧಕ, ಸಾಹಿತಿ ಹಾಗೂ ನಿವೃತ್ತ ಉಪನ್ಯಾಸಕ ಡಾ. ಕೆ. ಜಿ. ವಸಂತ ಮಾಧವ (ಗುಜ್ಜಾಡಿ ವಸಂತ ಮಾಧವ ಕೊಡಂಚ) ಇವರು ದಿನಾಂಕ 17 ಸೆಪ್ಟೆಂಬರ್ 2025 ರ ರಾತ್ರಿ ಬೆಂಗಳೂರಿನ ಮಗಳ ಮನೆಯಲ್ಲಿ ನಿಧನರಾದರು. ಅವರಿಗೆ 87 ವರ್ಷ ವಯಸ್ಸಾಗಿತ್ತು. ಅವರು ಪತ್ನಿ, ಒಬ್ಬ ಪುತ್ರ ಮತ್ತು ಒಬ್ಬ ಪುತ್ರಿಯನ್ನು ಅಗಲಿದ್ದಾರೆ.
1937ರ ಏಪ್ರಿಲ್ 9ರಂದು ಜನಿಸಿದ ವಸಂತ ಮಾಧವ ಅವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಇತಿಹಾಸದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು. ಕೆನರಾದ ರಾಜಕೀಯ ಇತಿಹಾಸ : 1565-1763 ಎಂಬ ವಿಷಯದ ಮೇಲೆ ಮಹಾಪ್ರಬಂಧ ರಚಿಸಿ ಪಿಎಚ್.ಡಿ. ಪದವಿಗೂ ಪಾತ್ರರಾದರು. ಮುಲ್ಕಿಯ ವಿಜಯಾ ಕಾಲೇಜಿನಲ್ಲಿ 32 ವರ್ಷಗಳ ಕಾಲ ಇತಿಹಾಸ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ ಅವರು ನಿವೃತ್ತಿಯ ನಂತರ ಕೇರಳದ ಕ್ಯಾಲಿಕಟ್ ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ಪ್ರೊಫೆಸರ್ ಆಗಿ ಸೇವೆ ಸಲ್ಲಿಸಿದ್ದರು.
Subscribe to Updates
Get the latest creative news from FooBar about art, design and business.
Previous Articleದೇರಳಕಟ್ಟೆಯಲ್ಲಿ ರಾಜ್ಯಮಟ್ಟದ ಭಾವೈಕ್ಯತಾ ಚುಟುಕು ಕವಿಗೋಷ್ಠಿ