ಮಂಗಳೂರು : ಕರ್ನಾಟಕ ಮುಸ್ಲಿಂ ಲೇಖಕರ ಸಂಘವು ರಾಜ್ಯಮಟ್ಟದ ‘ಮುಸ್ಲಿಂ ಸಾಹಿತ್ಯ ಪ್ರಶಸ್ತಿ’ಗೆ ಕೃತಿಗಳನ್ನು ಆಹ್ವಾನಿಸಿದೆ. ಪ್ರಶಸ್ತಿಯು ರೂ.10,000/- ನಗದು, ಪ್ರಶಸ್ತಿ ಪತ್ರ ಒಳಗೊಂಡಿದೆ.
ಮುಸ್ಲಿಂ ಬರಹಗಾರರು ಕನ್ನಡದಲ್ಲಿ ಪ್ರಕಟವಾದ 2024ನೇ ಸಾಲಿನ ಕೃತಿಯ ನಾಲ್ಕು ಪ್ರತಿಗಳನ್ನು ದಿನಾಂಕ 30 ಸೆಪ್ಟೆಂಬರ್ 2025ರ ಒಳಗೆ ಕಳುಹಿಸಬೇಕು. ಅನುವಾದಿತ ಕೃತಿಗಳನ್ನು ಪರಿಗಣಿಸುವುದಿಲ್ಲ ಎಂದು ಸಂಘದ ಅಧ್ಯಕ್ಷ ಉಮರ್ ಯು.ಎಚ್. ತಿಳಿಸಿದ್ದಾರೆ. ಕೃತಿ ಕಳುಹಿಸಬೇಕಾದ ವಿಳಾಸ : ಸಂಚಾಲಕರು, ಮುಸ್ಲಿಂ ಸಾಹಿತ್ಯ ಪ್ರಶಸ್ತಿ, ಮುಸ್ಲಿಂ ಲೇಖಕರ ಸಂಘ, ಹಿದಾಯತ್ ಸೆಂಟರ್, ಬೀಬಿ ಅಲಾಬಿ ರಸ್ತೆ, ಮಂಗಳೂರು -575001. ಹೆಚ್ಚಿನ ಮಾಹಿತಿಗೆ 9845054191, 0824-2410358 ಸಂಖ್ಯೆಯನ್ನು ಸಂಪರ್ಕಿಸಿರಿ.