ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಸಿಂಗಾರ ಸುರತ್ಕಲ್ ಮತ್ತು ಚೇಳ್ಯಾರು ಸರಕಾರಿ ಪದವಿ ಪೂರ್ವ ಕಾಲೇಜು ಇವುಗಳ ಸಹಭಾಗಿತ್ವದಲ್ಲಿ ‘ನಲ್ಮೆ ಬಲ್ಮೆ’ ವಿದ್ಯಾರ್ಥಿಗಳಿಗೆ ಮೂರು ದಿನಗಳ ರಂಗ ಕಾರ್ಯಾಗಾರವನ್ನು ದಿನಾಂಕ 24 ಸೆಪ್ಟೆಂಬರ್ 2025ರಿಂದ 26 ಸೆಪ್ಟೆಂಬರ್ 2025ರ ತನಕ ನಡೆಯಲಿದೆ.
ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ ಗಟ್ಟಿಯವರ ಅಧ್ಯಕ್ಷತೆಯಲ್ಲಿ ಹಿರಿಯ ರಂಗ ನಟಿ ಗೀತಾ ಸುರತ್ಕಲ್ ಇವರು ಈ ಕಾರ್ಯಾಗಾರ ಉದ್ಘಾಟಿಸಲಿದ್ದಾರೆ. ಚೇಳ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷ ಜಯಾನಂದ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ವೆಂಕಟೇಶ್ ಶೆಟ್ಟಿ, ಸಮಿತಿಯ ಸದಸ್ಯ ಪುಷ್ಪರಾಜ್ ಶೆಟ್ಟಿ, ರಂಗ ನಿರ್ದೇಶಕ ಜಗನ್ ಪವಾರ್ ಬೇಕಲ್ ಇವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.