ಬೆಂಗಳೂರು : ದಸರಾ ಹಬ್ಬದ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೀಡುವ 2025ನೇ ಸಾಲಿನ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಗೆ ಪಂಡಿತ್ ವೆಂಕಟೇಶ್ ಕುಮಾರ್ ಆಯ್ಕೆಯಾಗಿದ್ದಾರೆ.
ಈ ಪ್ರಶಸ್ತಿಯು 5 ಲಕ್ಷ ರೂಪಾಯಿ ನಗದು, ಸ್ಮರಣಿಕೆ ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಡಿದೆ ದಿನಾಂಕ 22 ಸೆಪ್ಟೆಂಬರ್ 2025ರಂದು ಮೈಸೂರಿನ ಅರಮನೆಯ ಮುಂಭಾಗದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಡಾ. ವೈ. ಕೆ. ಮುದ್ದುಕೃಷ್ಣ ಅವರ ಆಯ್ಕೆ ಸಲಹಾ ಸಮಿತಿ ಪಂ. ವೆಂಕಟೇಶ್ ಕುಮಾರ್ ಅವರನ್ನು ಆಯ್ಕೆ ಮಾಡಿದೆ. ಅವರ ಆಯ್ಕೆ ಅತ್ಯಂತ ಸಂತೋಷ ತಂದಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.