ಸುಳ್ಯ: ದೇಲಂಪಾಡಿ ಬನಾರಿಯ ಕೀರಿಕ್ಕಾಡು ಸಾಂಸ್ಕೃತಿಕ ಅಧ್ಯಯನ ಕೇಂದ್ರ ಮತ್ತು ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದ ವತಿಯಿಂದ ಕವಿ, ಅರ್ಥದಾರಿ, ಯಕ್ಷಗಾನ ಗುರುಕುಲದ ರೂವಾರಿ ಕೀರಿಕ್ಕಾಡು ಮಾಸ್ತರ್ ವಿಷ್ಣು ಭಟ್ಟರ ಹೆಸರಿನಲ್ಲಿ ಪ್ರತಿವರ್ಷವೂ ನೀಡಲಾಗುತ್ತಿರುವ ಪ್ರತಿಷ್ಠಿತ ‘ಕೀರಿಕ್ಕಾಡು ಪ್ರಶಸ್ತಿ’ಯನ್ನು ಶಿಕ್ಷಣ ಕ್ಷೇತ್ರದ ಮಹಾನ್ ಸಾಧಕ, ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ ಕ್ಷೇತ್ರಗಳ ನೇತಾರ, ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವರಿಗೆ ನೀಡಲಾಗುವುದು.
ದಿನಾಂಕ 25 ಅಕ್ಟೋಬರ್ 2025ರಂದು ಬನಾರಿ ಕೀರಿಕ್ಕಾಡು ಸಾಂಸ್ಕೃತಿಕ ಅಧ್ಯಯನ ಕೇಂದ್ರದಲ್ಲಿ ನಡೆಯಲಿರುವ ದೇಲಂಪಾಡಿಯ ಬನಾರಿ ಶ್ರೀಗೋಪಾಲಕೃಷ್ಣ ಯಕ್ಷಗಾನ ಸಂಘದ ವಾರ್ಷಿಕೋತ್ಸವದ ಸಂದರ್ಭದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು ದೇಲಂಪಾಡಿ ಬನಾರಿ ಕೀರಿಕ್ಕಾಡು ಸಾಂಸ್ಕೃತಿಕ ಅಧ್ಯಯನ ಕೇಂದ್ರ ಮತ್ತು ಬನಾರಿ ಯಕ್ಷಗಾನ ಕಲಾಸಂಘದ ಅಧ್ಯಕ್ಷ ಡಾ. ರಮಾನಂದ ಬನಾರಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Previous Articleರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಗೆ ಪಂ. ವೆಂಕಟೇಶ್ ಕುಮಾರ್ ಆಯ್ಕೆ
Next Article ಮೈಸೂರು ದಸರಾ ಕವಿಗೋಷ್ಠಿಗೆ ಯೋಗೀಶ್ ಕಾಂಚನ್ ಆಯ್ಕೆ